Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಟ: ಕೃಷಿ ಸಚಿವರಿಂದ ಶೇಂಗಾ ಬೆಳೆಯಲ್ಲಿ...

ಕೋಟ: ಕೃಷಿ ಸಚಿವರಿಂದ ಶೇಂಗಾ ಬೆಳೆಯಲ್ಲಿ ಕೂರಿಗೆ ವಿಧಾನದ ಬಿತ್ತನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Dec 2017 9:10 PM IST
share
ಕೋಟ: ಕೃಷಿ ಸಚಿವರಿಂದ ಶೇಂಗಾ ಬೆಳೆಯಲ್ಲಿ ಕೂರಿಗೆ ವಿಧಾನದ ಬಿತ್ತನೆಗೆ ಚಾಲನೆ

ಕೋಟ, ಡಿ.23: ಕರಾವಳಿಯಲ್ಲಿ ಅತ್ಯಂತ ಲಾಭದಾಯಕ ವಾಣಿಜ್ಯ ಬೆಳೆ ಎನಿಸಿಕೊಂಡಿರುವ ನೆಲಗಡಲೆ (ಶೇಂಗಾ) ಬೆಳೆಯಲ್ಲಿ ಯಾಂತ್ರೀಕೃತವಾದ ಕೂರಿಗೆ ವಿಧಾನದಲ್ಲಿ ಬಿತ್ತನೆಗೆ ರಾಜ್ಯ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಕೋಟ ಹೋಬಳಿಯ ಮಣೂರು ಗ್ರಾಮದಲ್ಲಿ ಚಾಲನೆ ನೀಡಿದರು.

ಕೃಷ್ಣ ಬೈರೇಗೌಡ ಅವರು ಮಣೂರಿನ ಕೃಷ್ಣ ಹೊಳ್ಳ, ರಾಮ ಹೊಳ್ಳ ಹಾಗೂ ಇತರರ ಗದ್ದೆಯಲ್ಲಿ ಟ್ರಾಕ್ಟರ್‌ಚಾಲಿತ ಕೂರಿಗೆ ಬಿತ್ತನೆ ಹಾಗೂ ಟಿಲ್ಲರ್ ಚಾಲಿತ ಕೂರಿಗೆ ಬಿತ್ತನೆಯ ಪ್ರಾತ್ಯಕ್ಷಿಕೆಯನ್ನು ತಾವೇ ಟ್ರಾಕ್ಟರ್ ಹಾಗೂ ಟಿಲ್ಲರ್‌ಗಳನ್ನು ಗದ್ದೆಯಲ್ಲಿ ಚಲಾಯಿಸುವ ಮೂಲಕ ರೈತಾಪಿ ಜನರಿಗೆ ತೋರಿಸಿದರು.

ವಿವಿಧ ಕಾರಣಗಳಿಂದ ಜನರು ಕೃಷಿಯಿಂದ ವಿಮುಖರಾಗುತ್ತಿರುವಾಗ ಯಾಂತ್ರೀಕರಣವೊಂದೇ ಕೃಷಿ ಉಳಿಯಲು ಅನಿವಾರ್ಯವಾಗಿದೆ ಎಂದು ಅವರು ಹೇಳಿದರು. ಶೇಂಗಾ ಕೃಷಿಯಲ್ಲಿ ಕೂರಿಗೆ ಪದ್ಧತಿಯನ್ನು ಅನುಸರಿಸುವು ದರಿಂದ ಶೇ.20ರಿಂದ 30ರಷ್ಟು ಖರ್ಚು ಕಡಿಮೆಯಾಗುವುದಲ್ಲದೇ, ಲಾಭಾಂಶವೂ ಅದೇ ಪ್ರಮಾಣದಲ್ಲಿ ಹೆಚ್ಚಾಗುವುದು. ಈಗ ಎಕರೆಗೆ 4ರಿಂದ 5 ಸಾವಿರ ರೂ.ವೆಚ್ಚವಾದರೆ, ಕೂರಿಗೆ ವಿಧಾನದಿಂದ ಅದು ಕೇವಲ ಒಂದು ಸಾವಿರ ಮಾತ್ರ ಆಗಿರುವುದು ಎಂದರು.

ಉಡುಪಿ ಜಿಲ್ಲೆಯಲ್ಲಿ ಸುಮಾರು 8ಸಾವಿರ ಹೆಕ್ಟೇರ್‌ನಲ್ಲಿ ದ್ವಿದಳಧಾನ್ಯ ಹಾಗೂ ಎಣ್ಣೆಕಾಳು ಬೆಳೆಯನ್ನು ಹಿಂಗಾರಿನಲ್ಲಿ ಬೆಳೆದರೆ, ಸುಮಾರು 2000 ಹೆಕ್ಟೇರ್‌ನಲ್ಲಿ ಶೇಂಗಾ ಬೆಳೆ ಬೆಳೆಯಲಾಗುತ್ತಿದೆ. ಕೂರಿಗೆ ವಿಧಾನದಿಂದ ಗೊಬ್ಬರದಲ್ಲೂ ಉಳಿತಾಯವಾಗುತ್ತದೆ. ಒಟ್ಟಾರೆ ಎಲ್ಲಾ ರೀತಿಯ ರೈತರಿಗೂ ಯಾಂತ್ರೀಕರಣ ಎಂಬುದು ದೇವರು ಕೊಟ್ಟ ವರದಂತೆ ಎಂದರು.

ಉಡುಪಿ ಜಿಲ್ಲೆಯ ಕೋಟ ಹೋಬಳಿ ಹಾಗೂ ಬೈಂದೂರು ಹೋಬಳಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ರೈತರು ನೆಲಗಡಲೆ ಬೆಳೆ ಬೆಳೆಯುತಿದ್ದಾರೆ. ಉಡುಪಿ ತಾಲೂಕಿನಲ್ಲಿ ಒಟ್ಟು 435 ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬೆಳೆಯಲಾಗುತ್ತಿದೆ. ಇದರಲ್ಲಿ 230 ಹೆಕ್ಟೇರ್ ಪ್ರದೇಶ ಕೋಟ ಹೋಬಳಿಯಲ್ಲಿ ಅದರಲ್ಲೂ ಮಣೂರು ಪರಿಸರದಲ್ಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಂತೋನಿ ತಿಳಿಸಿದರು. ಇಲ್ಲಿ 225 ಕ್ವಿಂಟಾಲ್ ಶೇಂಗಾ ಬೀಜದ ಬಿತ್ತನೆ ನಡೆಯುತ್ತಿದೆ. ಇದಕ್ಕೆ ಹಾಗೂ ಜಿಪ್ಸನ್ ಗೊಬ್ಬರವನ್ನು ಶೇ.50 ಸಬ್ಸಿಡಿಯಲ್ಲಿ ರೈತರಿಗೆ ವಿತರಿಸಲಾಗುತ್ತಿದೆ ಎಂದರು.

ಕೋಣದ ಸಹಾಯದಿಂದ ಉಳುಮೆ ಮಾಡಿ ಮಾಡುವ ಬಿತ್ತನೆಗಿಂತ ಪವರ್ ಟಿಲ್ಲರ್ ಹಾಗೂ ಟ್ರಾಕ್ಟರ್ ಬಳಸಿ ಮಾಡುವ ಬಿತ್ತನೆಯಿಂದ ಭಾರೀ ಉಳಿತಾಯವಾಗುವುದು ಹಾಗೂ ಇದು ಲಾಭದಾಯಕ ಸಹ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಗ್ರಾಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ರೈತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X