ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ವಿಚಾರಣೆಗೆ ದಿನ ನಿಗದಿ; ಮತ್ತೆ ಮುಂದೂಡಿಕೆ
ಉಡುಪಿ, ಡಿ.23: ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ವಿಚಾರಣೆ ಆರಂಭಿಸುವ ದಿನಾಂಕ ನಿಗದಿಪಡಿಸುವುದನ್ನು ಜ.8ಕ್ಕೆ ಮುಂದೂಡಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಂದು ಆದೇಶ ನೀಡಿದೆ.
ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯಕ್ ಬೆಂಗಳೂರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಅವ ರೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸಿದರು.
ಸಿಒಡಿ ಹೆಚ್ಚುವರಿ ಆರೋಪ ಪಟ್ಟಿ ಇನ್ನು ಕೂಡ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಇಂದು ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ ರಜೆಯಲ್ಲಿದ್ದ ಕಾರಣ ಕುಂದಾಪುರದ ವಿಶೇಷ ಅಭಿಯೋಜಕ ಬಿ.ಪ್ರಕಾಶ್ಚಂದ್ರ ಶೆಟ್ಟಿ ವಿಚಾರಣೆ ಸಂದರ್ಭ ಹಾಜರಿದ್ದರು.
Next Story





