ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲೂ ಕಾಂಗ್ರೆಸ್-ಮದನ್ ಪಟೇಲ್

ಮಂಗಳೂರು, ಡಿ.23: ಮುಂದಿನ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಗಳಿಸಲಿದೆ ಇದಕ್ಕೆ ಪೂರಕವಾಗಿ ಬೂತ್ ಮಟ್ಟದಿಂದ ಕೆಲಸ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮದನ್ ಪಟೇಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮಂಗಳೂರು, ಮೂಡಬಿದಿರೆ ಸೇರಿದಂತೆ ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಮಂಗಳೂರು ಉತ್ತರ ಮತ್ತು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ನಾವು ಕಳೆದ ಚುನಾವಣೆಯಲ್ಲಿ ಕಳೆದುಕೊಂಡ ಒಂದು ವಿಧಾನ ಸಭಾ ಕ್ಷೇತ್ರವನ್ನು ಮರಳಿ ಪಡೆಯುತ್ತೆವೆ ಎನ್ನುವ ವಿಶ್ವಾಸವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳಿದ ನಾಲ್ಕು ವಿಧಾನ ಸಭಾ ಕ್ಷೇತ್ರಗಳ ಉಸ್ತುವಾರಿಯನ್ನು ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್ ವಹಿಸಲಿದ್ದಾರೆ ಎಂದು ಮದನ್ ಪಟೇಲ್ ತಿಳಿಸಿದ್ದಾರೆ.
ಬಿಜೆಪಿ ಕೇಡರ್ ಬೇಸ್ ಪಾರ್ಟಿ ಆಗಿ ಉಳಿದಿಲ್ಲ:- ರಾಜ್ಯದಲ್ಲಿ ಬಿಜೆಪಿ ಕೇಡರ್ ಬೇಸ್ ಪಾರ್ಟಿಯಾಗಿ ಉಳಿದಿಲ್ಲ. ಕೇವಲ ನಾಯಕರ ಪಕ್ಷವಾಗಿ ಬಿಜೆಪಿ ಪರಿವರ್ತನೆಯಾಗಿದೆ. ಅಲ್ಲದೆ ಬಿಜೆಪಿ ಸುಳ್ಳುಗಳನ್ನೇ ಪದೇ ಪದೇ ಹೇಳಿ ಜನರನ್ನು ನಂಬಿಸುತ್ತಿದ್ದಾರೆ. ಕಾಂಗ್ರೆಸ್ ಜನಪರ ಯೋಜನೆಗಳ ಮೂಲಕ ಜನರ ಮನತಲುಪಿದೆ. ಕೇಡರ್ ಬೇಸ್ ಪಾರ್ಟಿಯಾಗಿ ಬೆಳೆದಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ವೇಣು ಗೋಪಾಲ್‌ರವರ ಮಾರ್ಗದರ್ಶನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮದನ್ ಪಟೇಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಂಗಳೂರು ದಕ್ಷಿಣ, ಉತ್ತರ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಮುಖಂಡರಾದ ಸುರೇಂದ್ರ ಕಾಂಬ್ಳಿ, ಜೆ.ಎ.ಸಲೀಂ, ಪ್ರೇಮ್ ಕುಮಾರ್, ಸದಾಶಿವ ಅಮೀನ್, ದುರ್ಗಾ ಪ್ರಸಾದ್, ಪ್ರೇಮ್‌ಬಲ್ಲಾಳ್ ಬಾಗ್, ನಝೀರ್ ಬಜಾಲ್, ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಎನ್.ಎಸ್.ಕರೀಂ, ಮನಪಾ ಸದಸ್ಯರಾದ ಲತೀಫ್ ಕಂದಕ್, ಮಹಿಳಾ ಘಟಕದ ಸದಸ್ಯರಾದ ಶಕುಂತಳಾ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.







