Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪದವಿ ವಿದ್ಯಾರ್ಥಿಗಳಿಗೆ ಉಚಿತ...

ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

5ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಸಚಿವ ಬಸವರಾಜ ರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ23 Dec 2017 10:31 PM IST
share
ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

ದಾವಣಗೆರೆ, ಡಿ.23: ಎಲ್ಲ ಸಮುದಾಯಗಳ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳು ಆಗಿರುವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ನಗರದ ಹೊರವಲಯದ ತೋಳಹುಣಸೆಯ ಸಮೀಪದ ಶಿವಗಂಗೋತ್ರಿ ಆವರಣದಲ್ಲಿ ಶನಿವಾರ ನಡೆದ ದಾವಣಗೆರೆ ವಿವಿಯ 5ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ನಡೆಸಲು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲ್ಲ ಸಮುದಾಯದ ಪದವಿ ವಿದ್ಯಾರ್ಥಿಗಳಿಗೂ ವಿಶ್ವಗುಣಮಟ್ಟದ ಲ್ಯಾಪ್‌ಟಾಪ್‌ಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಹೇಳಿದರು.

ಮೊದಲ ಹಂತದಲ್ಲಿ ಪ್ರಥಮ ಪದವಿ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ಎಸ್ಸಿ, ಎಸ್ಟಿ ಸಮುದಾಯದ 36 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಟೆಂಡರ್ ಕರೆಯಲಾಗಿತ್ತು. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಜನವರಿ ಮೊದಲ ಅಥವಾ 2ನೆ ವಾರದಲ್ಲಿ ಲ್ಯಾಪ್‌ಟ್ಯಾಪ್ ವಿತರಣೆ ಮಾಡಲಾಗುವುದು ಎಂದರು. ವಿವಿಗಳಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ಬಜೆಟ್‌ನಲ್ಲಿ ಈ ಬಗ್ಗೆ ಘೋಷಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದ ಅವರು, ವಿಪಕ್ಷಗಳು ಹೊಟ್ಟೆಕಿಚ್ಚು, ತಾತ್ಸಾರಪಟ್ಟು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಲ್ಲು ಹಾಕಬಾರದು. ಬದಲಾವಣೆ ಬಯಸಿದ್ದ ಯೇಸುಕ್ರಿಸ್ತ, ಗಾಂಧಿ, ಬಸವಣ್ಣನರನ್ನು ಕೊಂದವರಿದ್ದಾರೆ. ನಮ್ಮ ಸರಕಾರವೂ ಬದಲಾವಣೆಯನ್ನು ಬಯಸುತ್ತಿದ್ದು, ಕೆಲ ವಾಮಶಕ್ತಿಗಳು ಇದನ್ನು ತಡೆಯುವ ಪ್ರಯತ್ನ ಮಾಡುತ್ತಿವೆ. ಆದರೆ, ನಮ್ಮ ಸರಕಾರ ಇದ್ಯಾವುದಕ್ಕೂ ತೆಲೆ ಕೆಡಿಸಿಕೊಳ್ಳದೇ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿಲ್ಲಲಿದೆ ಎಂದು ಹೇಳಿದರು.

ಖ್ಯಾತ ವಿಜ್ಞ್ಞಾನಿ ಹಾಗೂ ಬೆಂಗಳೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಚ್.ಎ. ರಂಗನಾಥ್ ಘಟಿಕೋತ್ಸವ ಭಾಷಣ ಮಾಡಿದರು. ದಾವಣಗೆರೆ ವಿವಿ ಕುಲಪತಿ ಪ್ರೊ.ಬಿ.ಬಿ. ಕಲಿವಾಳ ಸ್ವಾಗತ ಭಾಷಣ ಮಾಡಿದರು. ಕುಲಸಚಿವ ಎಸ್.ವಿ. ಹಲಸೆ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X