ಚಿಕ್ಕಮಗಳೂರು: ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ; ಪ್ರತಿಭಟನೆ

ಚಿಕ್ಕಮಗಳೂರು, ಡಿ. 23: ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೊಪ್ಪ ತಾಲೂಕಿನ ಬಿಜೆಪಿ ಕಚೇರಿ ಮುಂಭಾಗ ಶನಿವಾರ ನಡೆದಿದೆ.
ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ನಂತರ ಪರಸ್ಪರ ಹಲ್ಲೆ ನಡೆದಿದೆ ಎನ್ನಲಾಗಿದೆ. ಹಲ್ಲೆಯಿಂದ ಬಿಜೆಪಿ ಕಾರ್ಯಕರ್ತ ರಾಕೇಶ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕೋಪಗೊಂಡ ಬಿಜೆಪಿ ಕಾರ್ಯಕರ್ತರು ರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕೊಪ್ಪ ಬಿಜೆಪಿ ಕಚೇರಿಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು ದಾಂಧಲೆ ಮಾಡಿದ್ದಾರೆಂಬ ಆರೋಪ ಬಿಜೆಪಿ ಕಾರ್ಯಕರ್ತರಿಂದ ಕೇಳಿ ಬಂದಿದ್ದು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಒತ್ತಾಯಿಸಿದೆ.
Next Story





