Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಹಿಂದೂ ಹಿತರಕ್ಷಣಾ ಸಮಿತಿ...

ಪುತ್ತೂರು: ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Dec 2017 6:07 PM IST
share
ಪುತ್ತೂರು: ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

ಪುತ್ತೂರು,ಡಿ.25: ಸಂಪ್ಯ ಠಾಣೆಯಲ್ಲಿ ನಿರಂತರವಾಗಿ ಅಮಾಯಕ ಹಿಂದುಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದ್ದು, ಹಿಂದುಗಳನ್ನು ಉದ್ದೇಶಪೂರ್ವಕವಾಗಿ ಗುರಿ ಮಾಡಲಾಗುತ್ತಿದೆ. ಇದಕ್ಕೆ ಕಾರಣವಾಗುತ್ತಿರುವ ಮತೀಯ ಶಕ್ತಿಗಳನ್ನು ಮಟ್ಟ ಹಾಕಬೇಕು. ವಿನಾ ಕಾರಣ ಹಿಂದುಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಇಲ್ಲಿನ ತಪ್ಪಿತಸ್ತ ಅಧಿಕಾರಿಗಳನ್ನು ತಕ್ಷಣ ಸೇವೆಯಿಂದ ವಜಾ ಮಾಡಬೇಕು ಇಲ್ಲವೇ ಇಲ್ಲಿಂದ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಟಂದೂರು ಹೇಳಿದರು.

ಅವರು ಹಿಂದೂ ಹಿತ ರಕ್ಷಣಾ ಸಮಿತಿ ವತಿಯಿಂದ ಸೋಮವಾರ ಮಂಜಲ್ಪಡ್ಪು ಎಎಸ್‍ಪಿ ಕಚೇರಿ ಮುಂಭಾಗದಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದರು. 

ಸಂಪ್ಯ ಠಾಣೆಯ ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಅಥವಾ ಸೇವೆಯಿಂದ ವಜಾ ಮಾಡಿ ಎಂದು ಇದೀಗ ನಾಲ್ಕನೆ ಬಾರಿಗೆ ಆಗ್ರಹ ಮಾಡುತ್ತಿದ್ದೇವೆ. ಈ ಹಿಂದೆ ಮಾಡಿರುವ ಯಾವುದೇ ಆಗ್ರಹಕ್ಕೆ ಸ್ಪಂದನೆ ಸಿಕ್ಕಿಲ್ಲ. ಜಿಲ್ಲೆಯ ಯಾವುದೇ ಠಾಣೆಯಲ್ಲಿ ನಡೆಯದ ದೌರ್ಜನ್ಯ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಮಾತ್ರ ನಡೆಯುತ್ತಿದೆ ಇದರ ಹಿಂದೆ ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ ಅವರು ಅನ್ಯಾಯಕ್ಕೊಳಗಾದ ಮಂದಿಗೆ ನ್ಯಾಯ ಒದಗಿಸಬೇಕು ಎಂಬ ಹಿನ್ನಲೆಯಲ್ಲಿ ಜ.2 ರಂದು ಪುತ್ತೂರಿನಲ್ಲಿ ಪಾದಯಾತ್ರೆ ಮತ್ತು ಪ್ರತಿಭಟನೆ ನಡೆಸಲಿದ್ದು, ಈ ಮೂಲಕ ಜಿಲ್ಲೆ ಹಾಗೂ ರಾಜ್ಯಕ್ಕೆ ಸಂದೇಶವನ್ನು ನೀಡಲಿದ್ದೇವೆ ಎಂದರು. 

ಪ್ರತಿಭಟನೆಯಲ್ಲಿ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಹಿಂದು ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ,  ತಾಲೂಕು ಪಂಚಾಯತ್ ಸದಸ್ಯ ನಿರಂಜನ್, ಬಜರಂಗದಳ ದಕ್ಷಿಣ ಪ್ರಾಂತ ಗೋ ರಕ್ಷಕ್ ಪ್ರಮುಖ್  ಮುರಳೀಕೃಷ್ಣ ಹಸಂತಡ್ಕ, ಬಿಜೆಪಿ ಮುಖಂಡರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ, ಸಹಜ್ ರೈ ಬಳಜ್ಜ, ಜಯಂತಿ ನಾಯಕ್, ಜೀವಂಧರ್ ಜೈನ್, ಕೃಷ್ಣ ಶೆಟ್ಟಿ ಕಡಬ, ಲಕ್ಷಣ ಗೌಡ, ಗೌರಿ ಬನ್ನೂರು, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ ಗೌಡ ಬಜತ್ತೂರು, ನಗರಸಭಾ ಉಪಾಧ್ಯಕ್ಷ ವಿಶ್ವನಾಥ ಗೌಡ, ಸದಸ್ಯರಾದ ರಾಮಣ್ಣ ಗೌಡ ಹಲಂಗ, ವಿನಯಭಂಡಾರಿ ಮತ್ತಿತರರು ಉಪಸ್ಥಿತರಿದ್ದರು. 

ತಾ,ಪಂ,ಸದಸ್ಯ ರಾಧಾಕೃಷ್ಣ ಬೋರ್ಕರ್ ಮನವಿ ವಾಚಿಸಿದರು. ಮನವಿಯನ್ನು ಎಎಸ್ಪಿ ಡಾ.ಅರುಣ್ ರವರಿಗೆ ನೀಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X