Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಕಿಸ್ಮಸ್

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಕಿಸ್ಮಸ್

ವಾರ್ತಾಭಾರತಿವಾರ್ತಾಭಾರತಿ25 Dec 2017 6:31 PM IST
share
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಕಿಸ್ಮಸ್

ಉಡುಪಿ, ಡಿ.25: ಏಸುಕ್ರಿಸ್ತರ ಜನ್ಮದಿನವಾದ ಕ್ರಿಸ್‌ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ಭಕ್ತಿ, ಶೃದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು.

ರವಿವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಜಿಲ್ಲೆಯ ವಿವಿಧ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಹಬ್ಬದ ಅಂಗವಾಗಿ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಮಿಲಾಗ್ರಿಸ್ ಕ್ಯಾಥೆಡ್ರಲ್ ಕಲ್ಯಾಣಪುರದಲ್ಲಿ ಬಲಿಪೂಜೆಯನ್ನು ಅರ್ಪಿಸಿದರೆ, ಉಳಿದ ಚರ್ಚುಗಳಲ್ಲಿ ಧರ್ಮಗುರುಗಳು ಕ್ರಿಸ್ಮಸ್ ಬಲಿಪೂಜೆಯನ್ನು ಅರ್ಪಿಸಿ ಹಬ್ಬದ ಸಂದೇಶವನ್ನು ನೀಡಿದರು.

ಉಡುಪಿ ಜಿಲ್ಲೆಯ ಪ್ರಮುಖ ದೇವಾಲಯಗಳು ಭಕ್ತಾದಿಗಳಿಂದ ತುಂಬಿ ತುಳುಕುತ್ತಿದ್ದವು. ಚರ್ಚ್‌ಗಳು ವರ್ಣಮಯ ವಿದ್ಯುತ್ ದೀಪಾಲಂಕಾರ ಹಾಗೂ ಬಗೆಬಗೆಯ, ಚಿತ್ತಾಕರ್ಷಕ ನಕ್ಷತ್ರಗಳಿಂದ ಕಂಗೊಳಿಸುತ್ತಿದ್ದವು. ರವಿವಾರ ರಾತ್ರಿ ಪೂಜೆಯ ವೇಳೆ ಸಿಂಗರಿಸಿಟ್ಟ ಗೋದಲಿಯಲ್ಲಿ ಬಾಲಯೇಸು ಮೂರ್ತಿಯನ್ನು ಇಟ್ಟು, ದೇವರ ಸ್ತುತಿ, ಜೋಗುಳದ ಮೂಲಕ ಆರಾಧಿಸಿದರು. ಮೇಣದ ಬತ್ತಿ ಬೆಳಗಿದರು. ಹೂವು, ಸುಗಂಧ ಅರ್ಪಿಸಿದರು.

ಜಿಲ್ಲೆಯ ಪ್ರಮುಖ ಚರ್ಚುಗಳಾದ ಶಿರ್ವ ಆರೋಗ್ಯ ಮಾತೆಯ ದೇವಾಲಯದಲ್ಲಿ ಧರ್ಮಗುರು ವಂ.ಸ್ಟ್ಯಾನಿ ತಾವ್ರೊ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಪ್ರಧಾನ ಧರ್ಮಗುರು ವಂ. ವಲೇರಿಯನ್ ಮೆಂಡೊನ್ಸಾ, ಕುಂದಾಪುರದ ಹೋಲಿ ರೋಜರಿ ಚರ್ಚಿನಲ್ಲಿ ವಂ.ಅನಿಲ್ ಡಿಸೋಜಾ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ.ಜೋರ್ಜ್ ಡಿಸೋಜಾ, ಕುಂತಳನಗರ ಚರ್ಚಿನಲ್ಲಿ ವಂ.ಡೆನಿಸ್ ಡೆಸಾ, ಸಾಸ್ತಾನ ಸಂತ ಅಂತೋನಿ ಚರ್ಚಿನಲ್ಲಿ ವಂ.ಜೋನ್ ವಾಲ್ಟರ್ ಮೆಂಡೊನ್ಸಾ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆಯ ಬಲಿಪೂಜೆಗಳು ನಡೆದವು. ಇದಲ್ಲದೆ ಮೂಡುಬೆಳ್ಳೆ, ಬಾರ್ಕೂರು, ಉದ್ಯಾವರ, ಶಂಕರಪುರ, ಬ್ರಹ್ಮಾವರ ಹಾಗೂ ಇನ್ನಿತರ ಚರ್ಚುಗಳಲ್ಲಿಸಹ ಹಬ್ಬದ ಆಚರಣೆ ಜರಗಿದವು.

ಹಬ್ಬದ ಅಂಗವಾಗಿ ಚರ್ಚ್‌ಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಮಕ್ಕಳ ಪ್ರೀತಿಗೆ ಪಾತ್ರನಾದ ಸಾಂತಾಕ್ಲಾಸ್ ವೇಷ, ಭಕ್ತಾದಿಗಳಿಗೆ ಕ್ರಿಸ್ಮಸ್ ಕೇಕ್ ವಿತರಣೆ ಕೂಡ ನಡೆಯಿತು.

ಕಾಪು ಶಾಸಕ ವಿನಯಕುಮಾರ್ ಸೊರಕೆ ತಮ್ಮ ಕ್ಷೇತ್ರ ವ್ಯಾಪ್ತಿಯ ಹೆಚ್ಚಿನೆಲ್ಲಾ ಚರ್ಚ್‌ಗಳಿಗೆ ಭೇಟಿ ನೀಡಿ ಕ್ರಿಶ್ಚಿಯನ್ ಬಾಂಧವರಿಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಹೇಳಿದರು.

ಹಬ್ಬದ ಅಂಗವಾಗಿ ಕ್ರೈಸ್ತರು ತಮ್ಮ ಮನೆಗಳಲ್ಲಿ ವಿಶೇಷ ಭಕ್ಷ್ಯ, ಭೋಜನ ಗಳನ್ನು ತಯಾರಿಸಿದ್ದರು. ಬಂಧು ಬಾಂಧವರು, ನೆರೆಹೊರೆ, ಸ್ನೇಹಿತರನ್ನು ತಮ್ಮ ಮನೆಗಳಿಗೆ ಆಹ್ವಾನಿಸಿ ಹಬ್ಬದ ಭೋಜನ ಸವಿದರು.

ಜಿಲ್ಲೆಯ ರೋಮನ್ ಕ್ಯಾಥೊಲಿಕ್ ಚರ್ಚುಗಳು ಮಾತ್ರವಲ್ಲದೆ ಸಿರೀಯನ್ ಕೆಥೊಲಿಕ್, ಪ್ರೊಟೆಸ್ಟೆಂಟ್, ಮೆಥೋಡಿಸ್ಟ್, ಯಹೋವನನ ಸಾಕ್ಷಿಗಳು, ನ್ಯೂ ಲೈಫ್ ಮತ್ತಿತರ ಪಂಥಗಳ ದೇವಾಲಯಗಳು ಹಾಗೂ ಮನೆಗಳಲ್ಲೂ ಆರಾಧನಾ ವೈವಿಧ್ಯತೆಯ ನಡುವೆಯ ಕ್ರಿಸ್‌ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X