ಕಾರು ಢಿಕ್ಕಿ: ಓರ್ವ ಮೃತ್ಯು
ಶಿವಮೊಗ್ಗ, ಡಿ.25: ಶಿವಮೊಗ್ಗ-ಭದ್ರಾವತಿ ನಡುವಿನ ರಾಷ್ಟ್ರೀಯ ಹೆದ್ದಾರಿ 206ರ ನಿದಿಗೆ ಗ್ರಾಮದ ಬಳಿ ಚಾಲನೆಯ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಇದರಿಂದ ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಮತ್ತೊಂದು ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.
ದುಮ್ಮಳ್ಳಿ ಗ್ರಾಮದ ಮುರುಗನ್ (45) ಮೃತಪಟ್ಟ ಕಾರು ಚಾಲಕ ಎಂದು ಗುರುತಿಸಲಾಗಿದೆ. ಮಿತಿಮೀರಿದ ವೇಗ, ಅಜಾಗರೂಕ ಚಾಲನೆಯೇ ಅವಘಡಕ್ಕೆ ಕಾರಣವೆಂದು ಹೇಳಲಾಗಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





