Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ್ಞ್ಞಾನ ಮೀಮಾಂಸೆಯನ್ನು ವಚನಕ್ಕೆ...

ಜ್ಞ್ಞಾನ ಮೀಮಾಂಸೆಯನ್ನು ವಚನಕ್ಕೆ ಕಟ್ಟಿಕೊಟ್ಟ ಮಹಾಪುರುಷ ಅಲ್ಲಮ: ಡಾ. ಕುಂಸಿ ಉಮೇಶ್

ವಾರ್ತಾಭಾರತಿವಾರ್ತಾಭಾರತಿ25 Dec 2017 11:17 PM IST
share
ಜ್ಞ್ಞಾನ ಮೀಮಾಂಸೆಯನ್ನು ವಚನಕ್ಕೆ ಕಟ್ಟಿಕೊಟ್ಟ ಮಹಾಪುರುಷ ಅಲ್ಲಮ: ಡಾ. ಕುಂಸಿ ಉಮೇಶ್

 ಚಿಕ್ಕಮಗಳೂರು, ಡಿ.25: ಜ್ಞ್ಞಾನ ಮೀಮಾಂಸೆಯನ್ನು ವಚನಕ್ಕೆ ಕಟ್ಟಿಕೊಟ್ಟ ಮಹಾಪುರುಷ ಅಲ್ಲಮ. ಜ್ಞ್ಞಾನ ಮೀಮಾಂಸೆ ಅಲ್ಲಮನಿಗೆ ದಕ್ಕಿದೆ. ಅಲ್ಲಮನನ್ನು ಅರಿ ಯುವುದು ಪ್ರಾಯೋಗದ ಕೆಲಸವಲ್ಲ ಎಂದು ಪ್ರಾಧ್ಯಾಪಕ ಡಾ. ಕುಂಸಿ ಉಮೇಶ್ ಅಭಿಪ್ರಾಯಿಸಿದ್ದಾರೆ. ಅವರು ಕ್ಯಾತನಬೀಡು ಪ್ರತಿಷ್ಠಾನ, ಅರಿವಿನ ಮನೆ ಪ್ರಕಾಶನದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಬಯಲ ಅಲ್ಲಮ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಪರಿಚಯಿಸಿ ಮಾತನಾಡುತ್ತಿದ್ದರು. ಅಲ್ಲಮ ಜ್ಞ್ಞಾನ ಮೀಮಾಂಸೆಯನ್ನು ಅತ್ಯಂತ ಸರಳವಾಗಿ ಕಟ್ಟಿಕೊಡುವ ಮೂಲಕ ಬಸವಣ್ಣ ಅರಿವಿನ ವಿಸ್ಮಯದ ವಿವೇಕವನ್ನು ಮಾಡದಿದ್ದರೆ ವಚನ ಸಾಹಿತ್ಯ ಉಳಿಯುತ್ತಿರಲಿಲ್ಲ. ಅಲ್ಲಮ ಅರ್ಥವಾಗಲ್ಲ ಎಂದು ಹಿಂದೆ ಉಳಿಯಬಾರದು. ಓದುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಪುಸ್ತಕ ಅನಾವರಣಗೊಳಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಪಂ ಸಿಇಒ ಕೆ.ದಯಾನಂದ್ ಮಾತನಾಡಿ ಅಲ್ಲಮ ಕೃತಿಯನ್ನು ಪರಿಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಈವರೆಗೂ ಯಾರಿಂದಲೂ ಸಾಧ್ಯವಾಗಿಲ್ಲ. ಅಲ್ಲಮನನ್ನು ಅರ್ಥಮಾಡಿಕೊಳ್ಳುವುದು ಕಷ್ಟದ ವಿಚಾರ. ಅಲ್ಲಮನ ಬಗ್ಗೆ ನಾಟಕ, ಸಿನಿಮಾ ಮಾಡಿ ದರೂ ಅವು 4 ದಿನವೂ ಪ್ರದರ್ಶನವಾಗಲಿಲ್ಲ ಎಂದರು. ಆಶಯ ಭಾಷಣ ಮಾಡಿದ ಅಂಕಣಕಾರ ಬಿ. ಚಂದ್ರೇಗೌಡ ಮಾತನಾಡಿ, 12ನೇ ಶತಮಾನದಲ್ಲೇ ಸಮಾಜದಲ್ಲಿದ್ದ ಅಜ್ಞ್ಞಾನ, ಅಂಧಕಾರ, ಮೂಢ ನಂಬಿಕೆಗಳ್ನು ವಿರೋಧಿಸಿದ ಮಹಾ ವಚನಕಾರ ಅಲ್ಲಮಪ್ರಭು, ಇವರ ಕಾವ್ಯ ಪ್ರತಿಭೆಯನ್ನು ಸಿನೆಮಾ ಮತ್ತು ನಾಟಕಗಳಲ್ಲಿ ತೋರಿಸುವುದು ಅಸಾಧ್ಯ ಎಂದು ತಿಳಿಸಿದರು.

 ಮಾಜಿ ಸಭಾಪತಿ ಬಿ.ಎಲ್.ಶಂಕರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾಜದಲ್ಲಿನ ಅನಿಷ್ಠಗಳಾದ ದಾಸ್ಯ, ಜಾತೀಯತೆ, ಕಂದಾಚಾರ ಹಾಗೂ ಮೂಢನಂಬಿಕೆಗಳ ವಿರುದ್ಧ 12ನೇ ಶತಮಾನದಲ್ಲಿ ಹೋರಾಟ ನಡೆಸಿದ ಪ್ರಪಂಚ ಕಂಡ ಸಭಾಧ್ಯಕ್ಷ ಅಲ್ಲಮರು. ಬುದ್ಧನ ಕಾಲದಲ್ಲೇ ರಾಜ, ಮಂತ್ರಿಗಳನ್ನು ಪ್ರಶ್ನೆ ಮಾಡುವ ಮನೋಬಾವ ಹೊಂದಿದ್ದ ಕಾರಣ ಅನುವ ಮಂಟಪದಲ್ಲಿ ಭಾಗವಹಿಸಿ ಪ್ರಶ್ನಿಸುವ ಅಧಿಕಾರ ಅಲ್ಲಮರಿಗೆ ನೀಡಲಾಗಿತ್ತೆಂದು ತಿಳಿಸಿದರು.  ಪುಸ್ತಕದ ಲೇಖಕ ರವೀಶ್ ಕ್ಯಾತನಬೀಡು ಮಾತನಾಡಿ, ಪುಸ್ತಕ ಬರವಣಿಗೆಗೆ ಪ್ರೇರೇಪಿಸಿ, ಬೆನ್ನಲುಬಾಗಿ ನಿಂತ ಕುಟುಂಬ ಹಾಗೂ ಸ್ನೇಹಿತರಿಗೆ ಕೃತಜ್ಞತೆ ಸಲ್ಲಿಸಿದರು. ಇದೇ ಜಿಲ್ಲೆಯಲ್ಲಿ ಉಪವಿಬಾಗಾಧಿಕಾರಿಗಳಾಗಿ ಉತ್ತಮವಾಗಿ ಕೆಲಸ ನಿರ್ವಹಿಸಿ ಈ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಓ ಆಗಿ ಕೆಲಸ ನಿರ್ವಹಿಸುತ್ತಿರುವ ಕೆ.ದಯಾನಂದ್‌ರನ್ನು ವಿವಿಧ ಸಂಘಟನೆಗಳು ಸನ್ಮಾನಿಸಿದರು. ಸಾಹಿತಿ ಬೆಳವಾಡಿ ಮಂಜುನಾಥ್ ಸನ್ಮಾನಿತರನ್ನು ಪರಿಚಯಿಸಿದರು. ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಮೇಶ್, ಶಾಂತಿನಿಕೇತನ ಹಾರ್ಟ್ ಫೌಂಡೇಶನ್‌ನ ಪ್ರಾಂಶುಪಾಲ ವಿಶ್ವಕರ್ಮ ಆಚಾರ್ಯಾ ಉಪಸ್ಥಿತರಿದ್ದರು. ಅಜ್ಜಂಪುರ ಜಿ.ಸೂರಿ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಸೂರಿ ಪ್ರಭು ಸ್ವಾಗತಿಸಿದರು. ಲೋಕೇಶಪ್ಪ ವಂದಿಸಿದರು. ಮಂಜುನಾಥ್‌ಸ್ವಾಮಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X