ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಬೆಂಗಳೂರು, ಡಿ.26: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಗರದಲ್ಲಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಕಂಪೆನಿಯೊಂದರ ಉದ್ಯೋಗಿ ರಾಕೇಶ್‌ಗೌಡ(22) ಎಂಬುವರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾರೆ. ವೃಷಭಾವತಿ ನಗರದಲ್ಲಿ ವಾಸವಾಗಿದ್ದ ರಾಕೇಶ್‌ಗೌಡ ಸೋಮವಾರ ಸಂಜೆ ಮನೆಯಲ್ಲಿದ್ದ ಫ್ಯಾನ್‌ಗೆ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಬಿಇಎಂಎಲ್ ಲೇಔಟ್‌ನಲ್ಲಿ ಅಪ್ರಾಪ್ತನೊಬ್ಬ ಸೀರೆಯಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ. ಈ ಎರಡೂ ಪ್ರಕರಣಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





