Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಜ. 28, ಮಾ. 11 ರಂದು...

ಮಂಗಳೂರು: ಜ. 28, ಮಾ. 11 ರಂದು ರಾಷ್ಟ್ರೀಯ ಲಸಿಕಾ ದಿನ; ಡಾ.ಅಶೋಕ್

ವಾರ್ತಾಭಾರತಿವಾರ್ತಾಭಾರತಿ26 Dec 2017 8:02 PM IST
share

ಮಂಗಳೂರು, ಡಿ.26: ರಾಷ್ಟ್ರೀಯ ಪಲ್ಸ್ ಪೊಲಿಯೋ 2018-19 ಕಾರ್ಯಕ್ರಮದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯು ದ.ಕ. ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಶೋಕ್ ಮಾತನಾಡಿ, ಪೋಲಿಯೊ ನಿರ್ಮೂಲನೆಗಾಗಿ ರಾಜ್ಯಾದ್ಯಂತ 5 ವರ್ಷದೊಳಗಿನ ಮಕ್ಕಳಿಗಾಗಿ ಜ.28 ರಂದು ಮೊದಲನೆ ಸುತ್ತು ಹಾಗೂ ಮಾ. 11 ರಂದು ಎರಡನೇ ಸುತ್ತು ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೊಲಿಯೋ ಕಾರ್ಯಕ್ರಮ) ವನ್ನು ನಡೆಸಲಾಗುವುದು ಎಂದರು.

ಪಲ್ಸ್ ಪೋಲಿಯೊ ಕಾರ್ಯಕ್ರಮವು ಜಿಲ್ಲೆಯ 0-5 ವರ್ಷದ 1,56,408 ಮಕ್ಕಳಿಗೆ 921 ಬೂತ್‌ಗಳಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಸಹಕಾರದೊಂದಿಗೆ ಅಂಗನವಾಡಿ ಕೇಂದ್ರಗಳಲ್ಲಿ ಬೂತ್‌ಗಳನ್ನು ತೆರೆಯಲು ಅನುವು ಮಾಡಿಕೊಡಬೇಕು. ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳಾದ ಶಿಶು ಅಭಿವೃದ್ಧಿ ಕಾರ್ಯಕ್ರಮ ಅಧಿಕಾರಿ ಮತ್ತು ಮೇಲ್ವಿಚಾರಕರಿಗೆ ಪಲ್ಸ್ ಪೊಲಿಯೊ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುವುದು ಹಾಗೂ ಪಲ್ಸ್ ಪೋಲಿಯೊ ಕಾರ್ಯಕ್ರಮದ ಅವಧಿಯಲ್ಲಿ ಎಲ್ಲಾ ಅಂಗನಾವಾಡಿ ಕೇಂದ್ರಗಳ ಮೇಲ್ವಿಚಾರಣೆ ನಡೆಸುವುದು. ಅಂಗನವಾಡಿ ವ್ಯಾಪ್ತಿಯಲ್ಲಿ ಬರುವ ತಾಯಂದಿರಿಗೆ ಅಭಿಯಾನದ ಬಗ್ಗೆ ಮಾಹಿತಿ ನೀಡಬೇಕು. ಶಿಕ್ಷಣ ಇಲಾಖೆಯ ಸಹಕಾರದಿಂದ ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಅಸ್ಸೆಂಬ್ಲಿಯಲ್ಲಿ ಮಕ್ಕಳಿಗೆ ತಮ್ಮ ಮನೆಯ ಮತ್ತು ಅಕ್ಕ ಪಕ್ಕದ ಮನೆಯವರ ಪೋಷಕರಿಗೆ, ಹೆತ್ತವರಿಗೆ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗೆ ಕರೆದುಕೊಂಡು ಹೋಗಿ ಪೊಲಿಯೊ ಹನಿ ಹಾಕಿಸಿ ತಮ್ಮ ಮಕ್ಕಳನ್ನು ಮಾರಕ ರೋಗದಿಂದ ರಕ್ಷಿಸುವಂತೆ ತಿಳಿಸಬೇಕು ಎಂದು ಅವರು ತಿಳಿಸಿದರು.

ಪಲ್ಸ್ ಪೋಲಿಯೊ ಕಾರ್ಯಕ್ರಮದ ಮುಂಚಿತವಾಗಿ ಜ. 25 ರಿಂದ ಜ.31ರವರೆಗೆ ವಿದ್ಯುತ್ ಸ್ಥಗಿತಗೊಳಿಸದಂತೆ ಮೆಸ್ಕಾಂ ಇಲಾಖೆಗೆ ಮನವಿ ಮಾಡಲಾಗುವುದು. ಆರ್.ಟಿ.ಒ. ಇಲಾಖೆ ಅಧಿಕಾರಿಗಳಿಂದ ವಾಹನದ ವ್ಯವಸ್ಥೆಗಾಗಿ ಮನವಿ ಮಾಡಲಾಗುವುದು ಎಂದರು. ಗ್ರಾಮೀಣ ಅಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಗ್ರಾಮೀಣ ಮಟ್ಟದಲ್ಲಿ ತಮ್ಮ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯೊಂದಿಗೆ ಸಮನ್ವಯದಿಂದ ಕ್ಷೇತ್ರದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮವು ಸಂಪೂರ್ಣ ಯಶಸ್ವಿಯಾಗುವಂತೆ ಸಹಕರಿಸುವುದು ಹಾಗೂ ಈ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಪ್ರಚಾರ ನೀಡಬೇಕು.

ಸಮಾಜ ಕಲ್ಯಾಣ ಇಲಾಖೆ ಮತ್ತು ಐಟಿಡಿಪಿ ತಮ್ಮ ವ್ಯಾಪ್ತಿಗೆ ಬರುವ ವಸತಿ ಶಾಲೆ, ಅನಾಥ್ರಾಮ, ರಿಮೆಂಡ್ ಹೋಂ ಗಳನ್ನೊಳಗೊಂಡು 0-5 ವರ್ಷದೊಳಗಿನ ಮಕ್ಕಳಿಗೆ ಪೊಲಿಯೊ ಹನಿ ಹಾಕಿಸುವಂತೆ ಕ್ರಮ ವಹಿಸುವುದು ಹಾಗೂ ಈ ಕಾರ್ಯಕ್ರಮದ ಬಗ್ಗೆ ಮೇಲ್ವಿಚಾರಣೆ ಮತ್ತು ಪರಿಶೀಲನೆ ಮಾಡಬೇಕು. ಕಾರ್ಮಿಕ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಬರುವ ಕಾರ್ಮಿಕರಿಗೆ ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುವುದು. ಕಾರ್ಮಿಕರ 0-5 ವರ್ಷದೊಳಗಿನ ಮಕ್ಕಳಿಗೆ ಪೊಲಿಯೋ ಹನಿ ಹಾಕಿಸುವಂತೆ ಕ್ರಮ ವಹಿಸುವುದು ಹಾಗೂ ಈ ಕಾರ್ಯಕ್ರಮದ ಬಗ್ಗೆ ಮೇಲ್ವಿಚಾರಣೆ ಮತ್ತು ಪರಿಶೀಲನೆ ಮಾಡಬೇಕು. ರೋಟರಿ, ಲಯನ್ಸ್ ಸಂಸ್ಥೆ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಸಾರ್ವಜನಿಕರಿಗೆ ಪಲ್ಸ್ ಪೊಲಿಯೊ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ 0-5 ವರ್ಷದೊಳಗಿನ ಮಕ್ಕಳು ಪೊಲಿಯೊ ಹನಿಯಿಂದ ವಂಚಿತರಾಗದಂತೆ ಪೋಷಕರ ಮನವೊಲಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಡಾ.ಅಶೋಕ್ ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಮಾತನಾಡಿ, ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿ ಕಾರಿ ಡಾ. ರಾಮಕೃಷ್ಣ ರಾವ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X