ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವ ಕೇಂದ್ರ ಸಚಿವರ ವರ್ತನೆಗೆ ದ.ಕ. ಜಿಲ್ಲಾ ಕಾಂಗ್ರೆಸ್ ಖಂಡನೆ
ಮಂಗಳೂರು, ಡಿ.26: ಜಾತ್ಯತೀತವಾದಿಗಳನ್ನು ಅವಮಾನಿಸುವ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕೇಂದ್ರ ಸರಕಾರದ ಅನಂತ್ ಕುಮಾರ್ ಹೆಗಡೆಯ ವರ್ತನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಖಂಡಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಆಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸಚಿವರಾಗಿ ಸಂಸ್ಕಾರ ರಹಿತವಾಗಿ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ಕೆಲವು ಸಚಿವರು ತಲೆ ಕಡಿಯಿರಿ, ಕೈ ಕಡಿಯಿರಿ, ಬೆಂಕಿ ಹಚ್ಚುತ್ತೇವೆ ಎನ್ನುವ ಹೇಳಿಕೆ ನೀಡುತ್ತಿರುವುದು ದೇಶದ ಸಂಸ್ಕಾರಯುತ, ಸ್ವಾಭಿಮಾನಿ ಬದುಕು ರೂಪಿಸಿಕೊಂಡಿರುವ ಜನರಿಗೆ ಮಾಡಿರುವ ಅವಮಾನವಾಗಿರುತ್ತದೆ. ಈಗ ದೇಶದ ಸಂವಿಧಾನದ ಬಗ್ಗೆ ಕೀಳಾಗಿ ಮಾತನಾಡುತ್ತಿರುವುದು, ದೇಶದ ಸಂವಿಧಾನ ರಚಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರನ್ನು ಅವಮಾನಿಸುವ ರೀತಿಯ ಮಾತುಗಳನ್ನಾಡಿರುವುದು ಮತ್ತು ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





