Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉ.ಕ.ಜಿಲ್ಲೆಯಲ್ಲೂ ಇಂದಿರಾ ಕ್ಯಾಂಟೀನ್

ಉ.ಕ.ಜಿಲ್ಲೆಯಲ್ಲೂ ಇಂದಿರಾ ಕ್ಯಾಂಟೀನ್

ವಾರ್ತಾಭಾರತಿವಾರ್ತಾಭಾರತಿ26 Dec 2017 11:12 PM IST
share
ಉ.ಕ.ಜಿಲ್ಲೆಯಲ್ಲೂ ಇಂದಿರಾ ಕ್ಯಾಂಟೀನ್

ಕಾರವಾರ, ಡಿ.26: ಬೆಂಗಳೂರಿನಲ್ಲಿ ಸೇರಿದಂತೆ ಇತರ ಜಿಲ್ಲೆಯಲ್ಲೂ ಯಶಸ್ವಿಯಾಗಿರುವ ಇಂದಿರಾ ಕ್ಯಾಂಟೀನ್‌ನನ್ನು ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಆರಂಭಿಸಲು ರಾಜ್ಯ ಸರಕಾರ ಮುಂದಾಗಿದ್ದು ಜಿಲ್ಲೆಯ 11 ಕಡೆಗಳಲ್ಲಿ ಕ್ಯಾಂಟೀನ್‌ಆರಂಭಕ್ಕೆ ಸಿದ್ಧತೆ ನಡೆಸಲಾಗಿದೆ.

  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಜನರ ಮೆಚ್ಚುಗೆ ಪಾತ್ರವಾದ ಬೆನ್ನಲ್ಲೆ ರಾಜ್ಯದ ಎಲ್ಲ ಭಾಗಗಳಲ್ಲಿ ಕ್ಯಾಂಟೀನ್ ತೆರಯಲು ಸಿದ್ಧ್ದತೆ ಆರಂಭಗೊಂಡಿದೆ. ಅದರಂತೆ ಉತ್ತರಕನ್ನಡ ಜಿಲ್ಲೆಯಲ್ಲಿ ಈಗಾಗಲೇ 3 ನಗರಸಭೆ ಪುರಸಭೆ ಹಾಗೂ 4 ತಾಲೂಕು ಪಂಚಾಯತ್‌ವ್ಯಾಪ್ತಿಯಲ್ಲಿ ಕ್ಯಾಂಟೀನ್ ಆರಂಭಿಸಲು ಸ್ಥಳ ಗುರುತಿಸಲಾಗಿದ್ದು, ಯೋಜನೆಯಂತೆ ಎಲ್ಲವು ನಡೆದಲ್ಲಿ ನೂತನ ವರ್ಷಕ್ಕೆ ಜನರಿಗೆ ಕಡಿಮೆ ದರಲ್ಲಿ ಉಪಹಾರ ಹಾಗೂ ಮಧ್ಯಾಹ್ನದ ಊಟ ಲಭ್ಯವಾಗಲಿದೆ.

ಜಿಲ್ಲೆಗೆ 8.61 ಕೋಟಿ ಬಿಡುಗಡೆ: ಜಿಲ್ಲೆಯಲ್ಲಿ ನಿರ್ಮಾಣಗೊಳ್ಳಲಿರುವ 11 ಕ್ಯಾಂಟಿನ್ ಕಟ್ಟಡಗಳ ನಿರ್ಮಾಣದ ಜವಬ್ದಾರಿಯನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಐಡಿಎಲ್)ವಹಿಸಲಾಗಿದೆ. ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಅವಶ್ಯವಿರುವ ಜಾಗವನ್ನು ನಗರಾಭಿವೃದ್ಧ್ಧಿ ಕೋಶ ಹಸ್ತಾಂತರಿಸಿದೆ. ಒಟ್ಟಾರೆ ಜಿಲ್ಲೆಗೆ ಕ್ಯಾಂಟೀನ್ ನಿರ್ಮಾಣಕ್ಕೆ 8.61 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಎಲ್ಲೆಲ್ಲಿ ಕ್ಯಾಂಟೀನ್?: ವಿಸ್ತಾರವಾದ ಜಿಲ್ಲೆಯಲ್ಲಿ ಒಟ್ಟು 11 ಕಡೆಗಳಲ್ಲಿ ಕ್ಯಾಂಟಿನ್ ಆರಂಭಿಸಲು ಸಿದ್ಧ್ದತೆ ನಡೆದಿದ್ದು, ಕಾರವಾರದಲ್ಲಿ ಹಿಂದು ಹೈಸ್ಕೂಲ್ ಬಳಿ, ಭಟ್ಕಳ ಬಂದರು ರಸ್ತೆಯ ವಲ್ಲಭಬಾಯಿ ಪಟೇಲ್ ಗಾರ್ಡನ್ ಎದುರು, ಶಿರಸಿಯಲ್ಲಿ ದೇವಿಕೇರೆ ಭೂತಪ್ಪನ ಕಟ್ಟೆ ಸಮೀಪ, ದಾಂಡೇಲಿಯಲ್ಲಿ ಜೆ.ಎನ್.ರಸ್ತೆಯ ಕೆನರಾ ಬ್ಯಾಂಕ್ ಎದುರು, ಕುಮಟಾದ ಹಳೆ ಮೀನು ಮಾರುಕಟ್ಟೆ ಸಮೀಪ, ಅಂಕೋಲಾ ಸರಕಾರಿ ಆಸ್ಪತ್ರೆಯ ಸಮೀಪ, ಹಳಿಯಾಳದ ಮಾರುತಿಗಲ್ಲಿ ಸಮೀಪ, ಹೊನ್ನಾವರ ಬಸ್ ನಿಲ್ದಾಣದ ಸಮೀಪದ ಪಿಡಬ್ಲ್ಯುಡಿ ಖಾಲಿ ಜಾಗದಲ್ಲಿ, ಮುಂಡಗೋಡಿನ ಹುಬ್ಬಳ್ಳಿ-ಶಿರಸಿ ಮುಖ್ಯ ರಸ್ತೆಯ ಪಕ್ಕ ಖಾಲಿ ಸರಕಾರಿ ಜಾಗದಲ್ಲಿ, ಸಿದ್ದಾಪುರ ಕೊಂಡ್ಲಿಯಲ್ಲಿ, ಯಲ್ಲಾಪುರ ಪಪಂ ಕಚೇರಿಯ ಎದುರು ಸ್ಥಳ ಗುರುತಿಸಲಾಗಿದೆ.

ಮೇಲ್ವಿಚಾರಣೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ: ಕ್ಯಾಂಟೀನ್‌ನಲ್ಲಿ ರು. 5ಕ್ಕೆ ಬೆಳಗಿನ ಉಪಾಹಾರ ರು. 10 ಕ್ಕೆ ಮಧ್ಯಾಹ್ನದ ಊಟ ಲಭ್ಯವಾಗಲಿದೆ. ಆಹಾರ ಪೂರೈಕೆಯ ಶೇ 30ರಷ್ಟು ಸಹಾಯಧನವನ್ನು ಕಾರ್ಮಿಕ ಕಲ್ಯಾಣ ಇಲಾಖೆಯ ಕಾರ್ಮಿಕರ ಸೆಸ್‌ನಿಂದ ಪಡೆಯಬೇಕಿದೆ. ಉಳಿದ ಶೇ 70ರಷ್ಟನ್ನು ನಗರಾಭಿವೃದ್ಧಿ ಇಲಾಖೆಯಿಂದ ಒದಗಿಸಲಾಗುವುದು. ಕ್ಯಾಂಟೀನ್ ಮೇಲ್ವಿಚಾರಣೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ 10 ಅಧಿಕಾರಿಗಳ ಸಮಿತಿ ನೇಮಿಸಲಾಗಿದೆ. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಅದರ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ' ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಪಿ.ನಾಯ್ಕ ತಿಳಿಸಿದರು.

ಜನಸಂಖ್ಯೆ ಆಧಾರದ ಮೇಲೆ ವಿತರಣೆ

ಜನಸಂಖ್ಯೆ ಆಧಾರದ ಮೇಲೆ ಕ್ಯಾಂಟೀನ್‌ನಲ್ಲಿ ಪ್ರತಿ ಹೊತ್ತಿಗೆ ಇಂತಿಷ್ಟು ಜನರಿಗೆ ನೀಡಬೇಕು ಎಂದು ಮಿತಿ ಹೇರಲಾಗಿದೆ. ಅದರಂತೆ ಜಿಲ್ಲೆಯಲ್ಲಿ 25 ಸಾವಿರದವರೆಗೆ ಇರುವ ಹೊನ್ನಾವರ, ಸಿದ್ದಾಪುರ, ಮುಂಡಗೋಡ, ಯಲ್ಲಾಪುರಗಳಲ್ಲಿ 200 ಮಂದಿಗೆ ಒಂದು ಹೊತ್ತಿನ ಆಹಾರ ನೀಡಲಾಗುತ್ತದೆ. 25 ಸಾವಿರದಿಂದ 45 ಸಾವಿರ ಜನಸಂಖ್ಯೆ ಹೊಂದಿರುವ ಹಳಿಯಾಳ, ಕುಮಟಾ, ಭಟ್ಕಳ, ಅಂಕೋಲಾದಲ್ಲಿ 300 ಜನರಿಗೆ ಮತ್ತು 45 ಸಾವಿರದಿಂದ 1 ಲಕ್ಷವರೆಗೆ ಜನಸಂಖ್ಯೆ ಹೊಂದಿರುವ ಕಾರವಾರ, ಶಿರಸಿ, ದಾಂಡೇಲಿಗಳಲ್ಲಿ ಹೊತ್ತಿಗೆ 500 ಜನರಿಗೆ ಆಹಾರ ದೊರೆಯಲಿದೆ.

ಕ್ಯಾಂಟೀನ್ ನಿರ್ಮಾಣಕ್ಕೆ ಬೇಕಾದ ಜಾಗವನ್ನು ಗುರುತಿಸಿದ್ದು, ಕೆಆರ್‌ಐಡಿಎಲ್ ಸಂಸ್ಥೆಗೆ ಅದನ್ನು ಈಗಾಗಲೇ ಹಸ್ತಾಂತರಿಸಲಾಗಿದೆ. ಅಲ್ಲದೇ ಕ್ಯಾಂಟೀನ್ ನಡೆಸಲು ಟೆಂಡರ್ ಕರೆಯಲಾಗಿದೆ.

ಆರ್.ಪಿ.ನಾಯ್ಕ,  ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X