ಡಿ. 29: ಕೇಂದ್ರ ರಕ್ಷಣಾ ಸಚಿವೆ ಮಂಗಳೂರಿಗೆ
ಮಂಗಳೂರು, ಡಿ.27: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಡಿ. 29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ತನ್ನ ರಾಜ್ಯಸಭಾ ಸದಸ್ಯರ ಅನುದಾನದಲ್ಲಿ ನಗರದ ಮಲ್ಲಿಕಟ್ಟೆಯ ಮನಪಾ ಸಂಕೀರ್ಣದಲ್ಲಿ ನಿರ್ಮಿಸಲಾಗಿರುವ ಇಂಕ್ಯುಬೇಷನ್ ಸೆಂಟರ್‌ನ್ನ ಡಿ.29ರಂದು ಪೂ.11ಕ್ಕೆ ಅವರು ಉದ್ಘಾಟಿಸುವರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಜೆ.ಆರ್. ಲೋಬೊ, ಮೇಯರ್ ಕವಿತಾ ಸನಿಲ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





