ಆಯುಧ ವ್ಯಾಪಾರಿ ಭಂಡಾರಿಯ 26 ಕೋ. ರೂ. ಸೊತ್ತು ಮುಟ್ಟುಗೋಲು

ಹೊಸದಿಲ್ಲಿ, ಡಿ. 27: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ) ಉಲ್ಲಂಘಿಸಿದ ವಿವಾದಾತ್ಮಕ ಆಯುಧ ವ್ಯಾಪಾರಿ ಸಂಜಯ್ ಭಂಡಾರಿ ಹಾಗೂ ಇತರರ 26.61 ಕೋ. ರೂ. ಮೌಲ್ಯದ ಸೊತ್ತನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಬುಧವಾರ ಹೇಳಿದೆ.
ವಿದೇಶದಲ್ಲಿರುವ ಸೊತ್ತುಗಳ ವಿವರ ಬಹಿರಂಗಪಡಿಸದ ಹಿನ್ನೆಲೆಯಲ್ಲಿ ಇಲ್ಲಿನ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ 37 ಎ ಕಲಂ ಅಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಅದು ಹೇಳಿದೆ.
ಕಳೆದ ವರ್ಷ ಎಪ್ರಿಲ್‌ನಲ್ಲಿ ಭಂಡಾರಿ ವಿರುದ್ಧ ಆದಾಯ ತೆರಿಗೆ ಇಲಾಖೆ ಮೊದಲ ಬಾರಿಗೆ ತಪಾಸಣೆ ನಡೆಸಿತ್ತು. ಈ ಸಂದರ್ಭ ಅವರಿಗೆ ಸಂಬಂಧಿಸಿದ ಕಟ್ಟಡದಲ್ಲಿ ಸಂಕೀರ್ಣ ಅಧೀಕೃತ ರಕ್ಷಣೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದವು.ಅಧಿಕೃತ ರಹಸ್ಯಗಳ ಕಾಯ್ದೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಿಲ್ಲಿ ಪೊಲೀಸರು ಕೂಡ ಕಳೆದ ವರ್ಷ ಭಂಡಾರಿ ವಿರುದ್ಧ ಪ್ರಕರಣ ದಾಖಲಿಸಿದ್ದರು.
Next Story





