Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ರಿಕ್ಷಾ ಚಾಲಕನ ಕೊಲೆಯತ್ನ;...

ಮಂಗಳೂರು: ರಿಕ್ಷಾ ಚಾಲಕನ ಕೊಲೆಯತ್ನ; ದುಷ್ಕರ್ಮಿಗಳ ಗುರುತು ಪತ್ತೆ

ವಾರ್ತಾಭಾರತಿವಾರ್ತಾಭಾರತಿ27 Dec 2017 9:05 PM IST
share
ಮಂಗಳೂರು: ರಿಕ್ಷಾ ಚಾಲಕನ ಕೊಲೆಯತ್ನ; ದುಷ್ಕರ್ಮಿಗಳ ಗುರುತು ಪತ್ತೆ

ಮಂಗಳೂರು, ಡಿ. 27: ರಾ.ಹೆ. 66ರ ಜಪ್ಪಿನಮೊಗರು ಸಮೀಪ ರಿಕ್ಷಾ ಚಾಲಕನೊಬ್ಬನನ್ನು ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಉಳ್ಳಾಲ ಅಳೇಕಲ ನಿವಾಸಿ ಮುಹಮ್ಮದ್ ಶಾಕಿರ್ (35) ತಲವಾರು ದಾಳಿಗೊಳಗಾದ ರಿಕ್ಷಾ ಚಾಲಕ ಎಂದು ಗುರುತಿಸಲಾಗಿದೆ. ಅವರನ್ನು ಸರಿಪಳ್ಳ ನಿವಾಸಿಗಳಾದ ಭವಿತ್ ರಾಜ್ ಮತ್ತು ವೆಂಕಟೇಶ್ ಎಂಬವರು ಕೊಲೆಗೆ ಯುತ್ನಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

ಮುಹಮ್ಮದ್ ಶಾಕಿರ್ ಮಂಗಳವಾರ ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಬಿ.ಸಿ.ರೋಡ್‌ನಿಂದ ಪಂಪ್‌ವೆಲ್ ಮೂಲಕ ಉಳ್ಳಾಲದಲ್ಲಿರುವ ತನ್ನ ಮನೆಗೆ ರಿಕ್ಷಾದಲ್ಲಿ ತೆರಳುತ್ತಿದ್ದಾಗ ಕಾರೊಂದರಲ್ಲಿ ಹಿಂಬಾಲಿಸಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆಗೈದಿದ್ದು, ಇದರಿಂದ ರಿಕ್ಷಾ ಚಾಲಕ ಮುಹಮ್ಮದ್ ಶಾಕಿರ್‌ರ ಮುಖ ಮತ್ತು ಬಲಗಣ್ಣಿಗೆ ಗಂಭೀರ ಗಾಯವಾಗಿದೆ. ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ವಿವರ: ಮುಹಮ್ಮದ್ ಶಾಕಿರ್ ಮಂಗಳೂರಿನಲ್ಲಿ ರಿಕ್ಷಾವನ್ನು ಬಾಡಿಗೆಗೆ ಓಡಿಸುತ್ತಿದ್ದು, ಮಂಗಳವಾರ ರಾತ್ರಿ ಬಿ.ಸಿ.ರೋಡ್‌ಗೆ ಬಾಡಿಗೆಗೆ ಹೋಗಿದ್ದ ಅವರು ಮರಳಿ ಬರುವಾಗ ಈ ಕೃತ್ಯ ಸಂಭವಿಸಿದೆ ಎಂದು ತಿಳಿದು ಬಂದಿದೆ.

‘ಮುಹಮ್ಮದ್ ಶಾಕಿರ್ ಪ್ರತೀ ದಿನ ಸುಮಾರು 9 ಅಥವಾ 10 ಗಂಟೆಗೆ ಮನೆಗೆ ಸೇರುತ್ತಾರೆ. ಮಂಗಳವಾರ ರಾತ್ರಿ ಬಿ.ಸಿ.ರೋಡ್‌ಗೆ ಬಾಡಿಗೆಗೆ ತೆರಳಿದ್ದ ಕಾರಣ ಮನೆಗೆ ಮರಳುವಾಗ ತಡವಾಗಿತ್ತು. ಶಾಕಿರ್ ಚಲಾಯಿಸುತ್ತಿದ್ದ ರಿಕ್ಷಾವನ್ನು ಜಪ್ಪಿನಮೊಗರು ಬಳಿ ಕಾರೊಂದು ಓವರ್‌ಟೇಕ್ ಮಾಡಿತ್ತು. ಅಲ್ಲದೆ ಕಾರಿನಲ್ಲಿದ್ದ ಇಬ್ಬರು ಏಕಾಎಕಿ ಅವರ ಮೇಲೆ ತಲವಾರು ಬೀಸಿದ ಪರಿಣಾಮ ಶಾಕಿರ್‌ರ ತುಟಿ ಮತ್ತು ಬಲಗಣ್ಣಿಗೆ ಗಾಯವಾಗಿದೆ. ಪ್ರಾಣ ಭಯದಿಂದ ತಕ್ಷಣ ಶಾಕಿರ್ ರಿಕ್ಷಾವನ್ನು ಎಕ್ಕೂರು ಕಡೆಗೆ ಚಲಾಯಿಸಿಕೊಂಡು ಹಿಂದಿರುಗಿದರು. ದುಷ್ಕರ್ಮಿಗಳು ಶಾಕಿರ್‌ರನ್ನು ಹಿಂಬಾಲಿಸಿದರೂ ಕೂಡ ಎಕ್ಕೂರು ಬಳಿ ಜನರು ಇರುವುದನ್ನು ಕಂಡು ಪರಾರಿಯಾದರು. ದುಷ್ಕರ್ಮಿಗಳು ಪರಾರಿಯಾದುದನ್ನು ಖಚಿತಪಡಿಸಿಕೊಂಡ ಬಳಿಕ ಶಾಕಿರ್ ಮರಳಿ ತೊಕ್ಕೊಟ್ಟಿಗೆ ಆಗಮಿಸಿ ಖಾಸಗಿ ಆಸ್ಪತ್ರೆಗೆ ದಾಖಲಾದರು. ನಂತರ ಮನೆಯವರಿಗೆ ವಿಷಯ ತಿಳಿಸಿ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾದರು. ಇದೀಗ ಅಪಾಯದಿಂದ ಪಾರಾಗಿದ್ದರೂ ಶಸ್ತ್ರಚಿಕಿತ್ಸೆಗೊಳಪಡಿಸಲಾಗಿದೆ’ ಎಂದು ಶಾಕಿರ್‌ರ ನಿಕಟವರ್ತಿಗಳು ಪತ್ರಿಕೆಗೆ ತಿಳಿಸಿದ್ದಾರೆ.

ಗುರುತು ಪತ್ತೆ: ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸರು ಆರೋಪಿಗಳಾದ ಭವಿತ್ ರಾಜ್ ಮತ್ತು ವೆಂಕಟೇಶ್ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಆರೋಪಿ ಭವಿತ್‌ರಾಜ್‌ನ ಮೇಲೆ ಈ ಹಿಂದೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಾಗಿವೆ ಎಂದು ತಿಳಿದು ಬಂದಿದೆ. ಅವರು ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದು, ಶೀಘ್ರ ಬಂಧಿಸಲಾಗುವುದು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X