ಶಿವಾನಂದ ಸರ್ಕಲ್ ಬಳಿ ಉಕ್ಕಿನ ಸೇತುವೆ ನಿರ್ಮಾಣ ಖಚಿತ
ಬೆಂಗಳೂರು, ಡಿ.27: ಸಾಕಷ್ಟು ವಿವಾದ ಎಬ್ಬಿಸಿದ್ದ ಉಕ್ಕಿನ ಸೇತುವೆ ಸಿಲಿಕಾನ್ ಸಿಟಿಯಲ್ಲಿ ಮತ್ತೆ ತಲೆ ಎತ್ತುತ್ತಿದೆ. ಶಿವಾನಂದ ವೃತ್ತದಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕಾಗಿ ನಡೆಸಿದ ಮಣ್ಣಿನ ಪರೀಕ್ಷೆ ಯಶಸ್ವಿಯಾಗಿದ್ದು ಶೀಘ್ರವೇ ಸೇತುವೆ ನಿರ್ಮಾಣವಾಗಲಿದೆ. ಮೊದಲು ಕಾಮಗಾರಿಗೆ ಚಾಲನೆ ನೀಡಲಾಗಿದ್ದರೂ ನಂತರ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಮೆಜೆಸ್ಟಿಕ್‌ನಿಂದ-ವಿಂಡ್ಸರ್ ಮ್ಯಾನರ್, ರೇಸ್ ಕೋರ್ಸ್ ರಸ್ತೆು ಬಿಬಿಎಂಪಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಸ್ಟೀಲ್ ಫ್ಲೈಓವರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ, ಶಿವಾನಂದ ವೃತ್ತ ಬಳಿ ಮಣ್ಣನ್ನು ಪರಿಶೀಲನೆಗೆ ಒಳಪಡಿಸಲಾಗಿತ್ತು. 14.48 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಕಾಮಗಾರಿ ಪ್ರಾರಂಭಕ್ಕೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ. ಏರ್‌ಪೋರ್ಟ್ ರಸ್ತೆಯಲ್ಲಿ ನಿರ್ಮಿಸಲು ಹೊರಟಿದ್ದ ಉಕ್ಕಿನ ಸೇತುವೆ ಸಾಕಷ್ಟು ವಿವಾದ ಎಬ್ಬಿಸಿತ್ತು. ಪರಿಸರವಾದಿಗಳ ತೀವ್ರ ವಿರೋಧದಿಂದ ಹಾಗೂ ಗುತ್ತಿಗೆ ಪಡೆದ ಕಂಪೆನಿಗಳಿಂದ 65 ಕೋಟಿ ಕಿಕ್ ಬ್ಯಾಕ್ ಪಡೆದ ಆರೋಪ ಕೇಳಿ ಬಂದಿತಯಿಂದ ಕುಮಾರ ಕೃಪಾದವರೆಗೆ ಭಾರೀ ಪ್ರಮಾಣದಲ್ಲಿ ವಾಹನ ಸಂಚಾರದ ದಟ್ಟಣೆ ಇರುವುದರಿಂದ ಇದನ್ನು ನಿಯಂತ್ರಿಸಲು ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲಾಗುತ್ತಿದೆ. ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸಿಗ್ನಲ್ ದಾಟಿ ರೈಲ್ವೇ ಸೇತುವೆವರೆಗೆ ಸುಮಾರು 310 ಮೀಟರ್ ಉದ್ದದ ಉಕ್ಕಿನ ಸೇತುವೆ ನಿರ್ಮಿಸಲಾಗುತ್ತದೆ. ನಾಲ್ಕು ಪಥಗಳನ್ನು ಒಳಗೊಂಡಿದ್ದು ಸುಮಾರು 16 ಮೀಟರ್ ಅಗಲವಾಗಿರುತ್ತದೆ. ಆದರೆ ಮೂಲ ಪ್ರಸ್ತಾವನೆಗಿಂತ ಶೇ.35.96 ರಷ್ಟು ಹೆಚ್ಚುವರಿ ಗುತ್ತಿಗೆ ನೀಡಿದೆ.





