Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿವಳಿ ತಲಾಕ್ ಮಸೂದೆ ಕುರ್‌ಆನ್,...

ತ್ರಿವಳಿ ತಲಾಕ್ ಮಸೂದೆ ಕುರ್‌ಆನ್, ಸಂವಿಧಾನದ ವಿರುದ್ಧವಿದ್ದರೆ ಸ್ವೀಕಾರಾರ್ಹವಲ್ಲ : ಎಐಎಂಡಬ್ಲ್ಯುಪಿಎಲ್‌ಬಿ

ವಾರ್ತಾಭಾರತಿವಾರ್ತಾಭಾರತಿ27 Dec 2017 10:09 PM IST
share
ತ್ರಿವಳಿ ತಲಾಕ್ ಮಸೂದೆ ಕುರ್‌ಆನ್, ಸಂವಿಧಾನದ ವಿರುದ್ಧವಿದ್ದರೆ ಸ್ವೀಕಾರಾರ್ಹವಲ್ಲ : ಎಐಎಂಡಬ್ಲ್ಯುಪಿಎಲ್‌ಬಿ

  ಹೊಸದಿಲ್ಲಿ, ಡಿ. 20: ಸಂಸತ್ತಿನಲ್ಲಿ ಗುರುವಾರ ಮಂಡಿತವಾಗಲಿರುವ ಪ್ರಸ್ತಾಪಿತ ತ್ರಿವಳಿ ತಲಾಕ್ ಮಸೂದೆ ಕುರ್‌ಆನ್ ಅಥವಾ ಸಂವಿಧಾನದೊಂದಿಗೆ ಹೊಂದಾಣಿಗೆ ಆಗದೇ ಇದ್ದಲ್ಲಿ ಸ್ಪೀಕಾರಾರ್ಹವಲ್ಲ ಎಂದು ಕೆಲವು ಮುಸ್ಲಿಂ ಮಹಿಳಾ ಸಂಘಟನೆಗಳು ಬುಧವಾರ ಹೇಳಿವೆ.

 ನಿಕಾಹ್ (ವಿವಾಹ) ಒಂದು ಒಪ್ಪಂದ. ಆ ಒಪ್ಪಂದವನ್ನು ಮುರಿದವರಿಗೆ ಶಿಕ್ಷೆ ನೀಡಬೇಕು. ಆದಾಗ್ಯೂ, ಇದು (ಮಸೂದೆ) ಕುರ್‌ಆನ್ ಅಥವಾ ಸಂವಿಧಾನಕ್ಕೆ ಅನುಗುಣವಾಗಿ ಇಲ್ಲದೇ ಇದ್ದರೆ, ಯಾವುದೇ ಮುಸ್ಲಿಂ ಮಹಿಳೆ ಇದನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ಮಹಿಳೆಯರ ವೈಯುಕ್ತಿಕ ಕಾನೂನು ಮಂಡಳಿ (ಎಐಎಂಡಬ್ಲುಪಿಎಲ್‌ಬಿ) ಅಧ್ಯಕ್ಷೆ ಶೈಸ್ಟಾ ಅಂಬರ್ ಹೇಳಿದ್ದಾರೆ.

“ಕರಡು ಮಸೂದೆಯನ್ನು ಅಖಿಲ ಭಾರತ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ, ಅಖಿಲ ಭಾರತ ಮುಸ್ಲಿಂ ಮಹಿಳೆಯರ ವೈಯುಕ್ತಿಕ ಕಾನೂನು ಮಂಡಳಿ, ಜಮಾಅತ್ ಇಸ್ಲಾಮಿ, ಜಮಾಅತ್ ಉಲೇಮಾ-ಎ-ಹಿಂದ್ ಹಾಗೂ ಮಹಿಳೆಯರಿಗಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳ ಪರಿಶೀಲನೆಗೆ ನೀಡುವಂತೆ ಕೋರಿ ನಾನು ಕಾನೂನು ಆಯೋಗಕ್ಕೆ ಪತ್ರ ರವಾನಿಸಿದ್ದೆ. ಅಗತ್ಯವಿದ್ದರೆ ಚರ್ಚೆ ನಡೆಸಬಹುದು ಎಂದು ಉತ್ತರ ನೀಡಿದ್ದರು. ಆದರೆ, ಅದು ನಡೆಯಲಾರದು” ಎಂದು ಅವರು ಹೇಳಿದ್ದಾರೆ.

ಪ್ರಸಕ್ತ ವಿದ್ಯಮಾನಕ್ಕೆ ಅಖಿಲ ಭಾರತ ಮುಸ್ಲಿಂ ವೈಯಕ್ತಿ ಕಾನೂನು ಮಂಡಳಿಯನ್ನು ಹೊಣೆಯಾಗಿಸಿದ ಅಂಬರ್, ತ್ರಿವಳಿ ತಲಾಕ್ ಬಗ್ಗೆ ಮಂಡಳಿ ಎಂದಿಗೂ ಗಂಭೀರವಾಗಿ ಚಿಂತಿಸಿಲ್ಲ. ಈಗ ತುಂಬಾ ವಿಳಂಬವಾಗಿದೆ ಎಂದರು.

ಕುಟುಂಬ ನ್ಯಾಯಾಲಯದ ಕಾಯ್ದೆಯಲ್ಲಿ ಕುಟುಂಬವನ್ನು ಸಂರಕ್ಷಿಸಿಕೊಳ್ಳುವ ಅವಕಾಶ ಇದೆ. ಆದರೆ, ಪ್ರಸ್ತಾಪಿತ ಮಸೂದೆ ಇಂತಹ ಅವಕಾಶ ನೀಡುವುದಿಲ್ಲ ಎಂದು ಮುಸ್ಲಿಂ ಮಹಿಳಾ ಲೀಗ್‌ನ ಅಧ್ಯಕ್ಷೆ ನೈಶ್ ಹಸನ್ ಹೇಳಿದ್ದಾರೆ.

 ಈ ಮಸೂದೆ ಬಗ್ಗೆ ಆಕ್ಷೇಪಿಸಲು ತೃತೀಯ ಪಾರ್ಟಿಗೂ ಹಕ್ಕು ನೀಡಲಾಗಿದೆ. ಇದು ನ್ಯಾಯೋಚಿತವಲ್ಲ. ಈ ಮಸೂದೆ ಮಂಡನೆ ನಿಲ್ಲಿಸಬೇಕು ಹಾಗೂ ಸಂಕೀರ್ಣ ವಿಷಯಗಳ ಬಗ್ಗೆ ತುರ್ತಾಗಿ ಚರ್ಚೆ ನಡೆಸಬೇಕು ಎಂದು ಅವರು ಹೇಳಿದ್ದಾರೆ.

ಯಾವುದೇ ಚರ್ಚೆ ನಡೆಸದೆ ಮಸೂದೆ ಅಂಗೀಕರಿಸುವ ವಿರುದ್ಧ ನಾವು ಪ್ರತಿಭಟನೆ ನಡೆಸಲಿದ್ದೇವೆ ಎಂದು ಹಸನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X