ಮೂಲ ದಾಖಲೆಗಳ ಪರಿಶೀಲನೆ
ಬೆಂಗಳೂರು, ಡಿ.27: ರಾಜ್ಯ ಲೋಕಸೇವಾ ಆಯೋಗವು ಜಲಸಂಪನ್ಮೂಲ ಇಲಾಖೆಯ ಸಹಾಯಕ ಅಭಿಯಂತರರ (ಸಿವಿಲ್) 527 ಹುದ್ದೆಗಳಿಗೆ ತಾತ್ಕಾಲಿಕವಾಗಿ ಅರ್ಹರಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಜನವರಿ 4 ರಿಂದ 6 ರವರೆಗೆ ಆಯೋಗದ ಕೇಂದ್ರ ಕಚೇರಿ ಉದ್ಯೋಗ ಸೌಧದಲ್ಲಿ ನಡೆಸಲಿದೆ.
ಅರ್ಹ ಅಭ್ಯರ್ಥಿಗಳಿಗೆ ಸೂಚನಾ ಪತ್ರಗಳನ್ನು ಈಗಾಗಲೇ ತ್ವರಿತ ಅಂಚೆ ಮೂಲಕ ರವಾನಿಸಿದೆ. ಅರ್ಹ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಆಯೋಗದ ವೆಬ್‌ಸೈಟ್ http://kpsc.kar.nic.in ರಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಸೂಚನಾ ಪತ್ರಗಳನ್ನು ಆಯೋಗದ ಅಂತರ್ಜಾಲದಿಂದ Application ID ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





