ಕಲ್ಲಡ್ಕ ಚೂರಿ ಇರಿತ ಪ್ರಕರಣ: ಪೊಲೀಸ್ ವಶದಲ್ಲಿದ್ದ ಯುವಕ ಬಿಡುಗಡೆ

ಬಂಟ್ವಾಳ, ಡಿ. 27: ಕಲ್ಲಡ್ಕದಲ್ಲಿ ಮಂಗಳವಾರ ರಾತ್ರಿ ನಡೆದ ಕೊಲೆ ಆರೋಪಿಯೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ನಂತರ ಬಿಡುಗಡೆಗೊಳಿಸಿದ್ದಾರೆ.
ಕಲ್ಲಡ್ಕದ ನಿವಾಸಿ ಖಲೀಲ್ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿತ್ತು.
ಘಟನೆಯ ವೇಳೆ ಖಲೀಲ್ ಕಲ್ಲಡ್ಕದಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ ಘಟನೆಯಲ್ಲಿ ಖಲೀಲ್ ಪಾತ್ರವಿಲ್ಲದ ಹಿನ್ನೆಲೆಯಲ್ಲಿ ಕೆಲವು ನಿಬಂಧನೆಯ ಮೇರೆಗೆ ಬಿಡುಗಡೆಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
Next Story





