ಜ. 2ರಂದು ಉಡುಪಿಯಲ್ಲಿ ವೀರೇಂದ್ರ ಹೆಗ್ಗಡೆಗೆ ಅಭಿನಂದನೆ
ಉಡುಪಿ, ಡಿ.28: ಪರ್ಯಾಯ ಪೇಜಾವರ ಮಠ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾಗಿ 50 ವರ್ಷ ಪೂರೈಸಿರುವ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನಾ ಸಮಾರಂಭವವನ್ನು ಜ.2 ರಂದು ಸಂಜೆ 5ಗಂಟೆಗೆ ರಾಜಾಂಗಣದಲ್ಲಿ ಆಯೋಜಿಸಲಾಗಿದೆ.
ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ, ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿರುವರು. ನಾಗಾಲ್ಯಾಂಜ್ ರಾಜ್ಯಪಾಲ ಪದ್ಮನಾಭ ಬಿ.ಆಚಾರ್ಯ, ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸಲಿರುವರು. ಪ್ರೊ.ವೆಂಕಟನರಸಿಂಹಾಚಾರ್ಯ ಧಾವರಾಡ ಅಭಿನಂದನಾ ಭಾಷಣ ಮಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





