Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂಗ್ರೆಸ್‌ನಿಂದ ರೈತರಿಗೆ ಆತ್ಮಹತ್ಯೆ...

ಕಾಂಗ್ರೆಸ್‌ನಿಂದ ರೈತರಿಗೆ ಆತ್ಮಹತ್ಯೆ ಭಾಗ್ಯ: ಕುಮಾರಸ್ವಾಮಿ ವ್ಯಂಗ್ಯ

ಮಂಗಳೂರಿನಲ್ಲಿ ಎಚ್.ಡಿ.ಕೆ.

ವಾರ್ತಾಭಾರತಿವಾರ್ತಾಭಾರತಿ28 Dec 2017 9:10 PM IST
share
ಕಾಂಗ್ರೆಸ್‌ನಿಂದ ರೈತರಿಗೆ ಆತ್ಮಹತ್ಯೆ ಭಾಗ್ಯ: ಕುಮಾರಸ್ವಾಮಿ ವ್ಯಂಗ್ಯ

ಮಂಗಳೂರು, ಡಿ. 28: ರಾಜ್ಯದಲ್ಲಿ ರೈತರ ಸಾಲ ಮನ್ನಾ ಯೋಜನೆ ಘೋಷಣೆಯ ಬಳಿಕವೂ ರೈತರ ಆತ್ಮಹತ್ಯೆ ಮುಂದುವರಿದಿದ್ದು, ಸಿದ್ದರಾಮಯ್ಯ ಸರಕಾರ ರೈತರಿಗೆ ಆತ್ಮಹತ್ಯೆ ಭಾಗ್ಯ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನಗರ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರ 8,000 ಕೋಟಿ ರೂ. ಸಾಲ ಮನ್ನಾ ಮಾಡಿ ಜೂನ್ 28ಕ್ಕೆ ಆದೇಶ ಹೊರಡಿಸಲಾಗಿತ್ತು. ಆದರೆ, ಈವರೆಗೂ ಯಾವೊಬ್ಬ ರೈತನಿಗೂ ಸರಕಾರದಿಂದ ನಯಾ ಪೈಸೆ ಸಿಕ್ಕಿಲ್ಲ. ಸಾಲ ಮನ್ನಾ ಘೋಷಣೆ ಮಾಡಿದ ಬಳಿಕದ ದಿನಗಳಲ್ಲಿ ರಾಜ್ಯದಲ್ಲಿ ಸುಮಾರು 450 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಕಾರದ ಸಾಲ ಮನ್ನಾ ಯೋಜನೆ ರೈತರಿಗೆ ಇನ್ನೂ ತಲುಪಿಲ್ಲ. ಇದೊಂದು ಬೋಗಸ್ ಕಾರ್ಯಕ್ರಮ ಎಂದು ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ 3,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅನ್ನಭಾಗ್ಯ, ಕೃಷಿ ಭಾಗ್ಯ, ಸಾಲ ಮನ್ನಾ ಮೊದಲಾದ ಯೋಜನೆಗಳ ಹೊರತಾಗಿಯೂ ರೈತರು ಯಾಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಉತ್ತರ ನೀಡಬೇಕೆಂದರು.

ಕಾನೂನು ಸುವ್ಯವಸ್ಥೆ ಕುಸಿದಿದೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ರಾಜ್ಯದ ಕೆಲವೆಡೆಗಳಲ್ಲಿ ಸಣ್ಣ ಪುಟ್ಟ ಘರ್ಷಣೆಗಳೂ ಕೋಮು ಬಣ್ಣ ಪಡೆದುಕೊಳ್ಳುತ್ತಿವೆ. ಇತ್ತೀಚೆಗೆ ಹೊನ್ನಾವರದಲ್ಲಿ ನಡೆದ ಆಟೊ ರಿಕ್ಷಾ-ಬೈಕ್ ಚಾಲಕನ ನಡುವಿನ ಅಪಘಾತಕ್ಕೆ ಸಂಬಂಧಿಸಿ ಕೋಮು ಘಷರ್ಣೆ ನಡೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಕುಮಾರ ಸ್ವಾಮಿ ಹೇಳಿದರು.

ದ.ಕ. ಜಿಲ್ಲೆಯಲ್ಲಿ ಪದೇ ಪದೇ ಮರುಕಳುಸುತ್ತಿರುವ ಘರ್ಷಣೆಗಳಿಗೆ ಏನು ಕಾರಣ ಎಂಬುದು ಸರಕಾರಕ್ಕೆ ಈವರೆಗೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಕೆಲವೊಂದು ಘರ್ಷಣೆಗಳು ಕೋಮು ಬಣ್ಣ ಪಡೆದುಕೊಳ್ಳುತ್ತಿವೆ. ಅಮಾಯಕರು ಬಲಯಾಗುತ್ತಿದ್ದಾರೆ. ಯಾವುದೇ ದುಷ್ಕೃತ್ಯ ನಡೆದರೂ ಅದು ವೈಯಕ್ತಿಕ ವಾಗಿ ನಡೆದಿದೆಯೇ ಅಥವಾ ಕೋಮು ದ್ವೇಷದಿಂದ ಆಗಿದೆಯೇ ಎಂಬುದರ ಬಗ್ಗೆ ತನಿಖೆ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್, ಮಾಜಿ ಸಚಿವ ಕೆ. ಅಮರನಾಥ ಶೆಟ್ಟ, ಶಾಸಕ ಬಿ.ಬಿ. ನಿಂಗಯ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಅಕ್ಷಿತ್ ಸುವರ್ಣ, ಅಲ್ತಾಫ್, ಸದಾಶಿವ, ಇಕ್ಬಾಲ್ ಮುಲ್ಕಿ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X