ಮಡಿಕೇರಿ :ಡಿ.29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ
ಮಡಿಕೇರಿ ಡಿ.28 :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ವತಿಯಿಂದ ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ಡಿ.29 ರಂದು ಬೆಳಗ್ಗೆ 11 ಗಂಟೆಗೆ ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ನಡೆಯಲಿದೆ.
ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲೋಕೇಶ್ ಸಾಗರ್, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಕೊಡಗು ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್, ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸಂಸದರಾದ ಪ್ರತಾಪ್ ಸಿಂಹ ಇತರರು ಭಾಗವಹಿಸಲಿದ್ದಾರೆ.





