Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಹಿತಿ ಹಕ್ಕು: ವೆಯಕ್ತಿಕ ಮಾಹಿತಿಗೆ...

ಮಾಹಿತಿ ಹಕ್ಕು: ವೆಯಕ್ತಿಕ ಮಾಹಿತಿಗೆ ಅವಕಾಶವಿಲ್ಲ: ಡಾ.ಸುಚೇತನ ಸ್ವರೂಪ್

ವಾರ್ತಾಭಾರತಿವಾರ್ತಾಭಾರತಿ28 Dec 2017 10:42 PM IST
share
ಮಾಹಿತಿ ಹಕ್ಕು: ವೆಯಕ್ತಿಕ ಮಾಹಿತಿಗೆ ಅವಕಾಶವಿಲ್ಲ: ಡಾ.ಸುಚೇತನ ಸ್ವರೂಪ್

ಚಿಕ್ಕಮಗಳೂರು, ಡಿ.28: ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ವೈಯಕ್ತಿಕ ಮಾಹಿತಿಗಳನ್ನು ನೀಡಲು ಅವಕಾಶವಿರುವುದಿಲ್ಲ ಎಂದು ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಡಾ.ಸುಚೇತನ ಸ್ವರೂಪ್ ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳ ಜೊತೆ ಮಾಹಿತಿ ಹಕ್ಕು ಅಧಿನಿಯಮ-2005ರ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಅರ್ಜಿದಾರರು ಬೇರೊಬ್ಬರಿಗೆ ಸಂಬಂಧಿಸಿದ ವೈಯಕ್ತಿಕ ಮಾಹಿತಿಗಳನ್ನು ಕೇಳಿದರೆ ಅದನ್ನು ನೀಡಲು ಬರುವುದಿಲ್ಲ. ವ್ಯಕ್ತಿಯೊಬ್ಬನ ಶಾಲಾ ದಾಖಲಾತಿ, ಆತನ ಜಾತಿ ಪ್ರಮಾಣ ಪತ್ರ, ನೌಕರರ ಸೇವಾ ವಹಿ, ವೇತನ ಕುರಿತ ಮಾಹಿತಿಯನ್ನು ನೀಡುವಂತಿಲ್ಲ. ಆದರೆ ನೌಕರನ ಒಂದು ತಿಂಗಳ ವೇತನದ ವಿವರವನ್ನಷ್ಟೇ ನೀಡಬಹುದು ಎಂದು ಹೇಳಿದರು. ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರು ಕೋರಿದ ಮಾಹಿತಿಯನ್ನಷ್ಟೇ ನೀಡಬಹುದಾಗಿದೆ. ಬೇರೆ ಇಲಾಖೆಗೆ ಸಂಬಂಧಪಟ್ಟ ಮಾಹಿತಿಯನ್ನು ಅರ್ಜಿದಾರರು ಪ್ರತ್ಯೇಕ ಅರ್ಜಿಯ ಮೂಲಕ ಸಂಬಂಧಿಸಿದ ಇಲಾಖೆಗೆ ಸಲ್ಲಿಸಬೇಕು ಎಂದ ಅವರು, ಅರ್ಜಿದಾರರು ಸಲ್ಲಿಸಿದ ಒಂದೇ ಅರ್ಜಿಯನ್ನು ಬೇರೆ ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಲು ಅವಕಾಶವಿಲ್ಲ ಮತ್ತು ಮಾಹಿತಿಯನ್ನು ಸಂಗ್ರಹಿಸಿ ಕ್ರೂಢೀಕರಿಸಿ ಕೊಡಲು ಸಾಧ್ಯವಿಲ್ಲ ಎಂದು ನುಡಿದರು. ಅರ್ಜಿದಾರರು ಮಾಹಿತಿಯನ್ನು ನೀಡುವಂತೆ ಮನವಿ ಮಾಡಬಹುದೇ ಹೊರತು ಸ್ಪಷ್ಟನೆ ಮತ್ತು ಪ್ರಶ್ನೆಯ ಮೂಲಕ ಕೇಳುವಂತಿಲ್ಲ ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಕೋರಿ ಅರ್ಜಿ ಸಲ್ಲಿಸಿದಾಗ ಪ್ರಕರಣ ತನಿಖೆಯ ಹಂತದಲ್ಲಿದ್ದರೆ ಮಾಹಿತಿ ನೀಡಲು ಅವಕಾಶವಿರುವುದಿಲ್ಲ. ಆದರೆ ಅರ್ಜಿದಾರನು ತನಿಖೆಗೆ ಒಳಪಟ್ಟಿರುವಾಗ ಮಾಹಿತಿಯನ್ನು ನೀಡಬಹುದು ಎಂದರು.

ಅರ್ಜಿದಾರನು ಕೇಳಿದ ಮಾಹಿತಿಯನ್ನು ನೀಡಲು ಮಾಹಿತಿ ಪ್ರಾಧಿಕಾರಿಗಳಿಗೆ ಕಾನೂನಿನ ತೊಡಕಾಗಿದ್ದರೆ ಅರ್ಜಿಗೆ ಹಿಂಬರಹವನ್ನು ಒದಗಿಸಬೇಕು. ಮಾಹಿತಿ ನೀಡದೆ ಅರ್ಜಿದಾರರಿಗೆ ಎಷ್ಟು ಪುಟಗಳಾಗುತ್ತವೆ ಎಂಬ ಕುರಿತು ಪುಟ 1ಕ್ಕೆ 2 ರೂ.ನಂತೆ ಮಾಹಿತಿ ನೀಡಬೇಕು ನಂತರ ಅವರು ಹಣ ಪಾವತಿಸಿದ ಮೇಲೆ ಕೋರಿರುವ ಮಾಹಿತಿಯನ್ನು ನೀಡಬೇಕು ಎಂದು ಸೂಚಿಸಿದರು.

 ಮಾಹಿತಿಯನ್ನು ಪಡೆಯಲು ಜನರು ಯಾವುದೇ ಹಿಂಜರಿಕೆ ಇಲ್ಲದೆ ನಿಯಮದ ಪ್ರಕಾರ ಅರ್ಜಿ ಸಲ್ಲಿಸಬಹುದಾಗಿದ್ದು, ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಕಾನೂನು ಪಾಲಿಸುವ ಜೊತೆಗೆ ಕಾರ್ಯಾಂಗದ ಘನತೆಯನ್ನು ಎತ್ತಿಹಿಡಿಯಬೇಕು. ಪ್ರತಿ ಇಲಾಖೆಯ ಮೇಲ್ಮನವಿ ಅಧಿಕಾರಿಗಳು ತಿಂಗಳಿಗೊಮ್ಮೆ ಸಭೆ ಸೇರಿ ಮಾಹಿತಿ ಕೋರಿ ಬಂದಿರುವ ಅರ್ಜಿಗಳನ್ನು ವಿಲೇ ಮಾಡಲು ಕ್ರಮವಹಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ವಿಚಾರಣೆ ನಡೆಸಿ, ಕೆಲವು ಪ್ರಕರಣಗಳನ್ನು ಇತ್ಯರ್ಥಪಡಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ, ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಸಂಗಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಸುಪ್ರೀಂಕೋರ್ಟ್ ಆದೇಶದನ್ವಯ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ತೊಂದರೆ ಕೊಡುವ ಅಥವಾ ತೇಜೋವಧೆ ಮಾಡುವ ಉದ್ದೇಶದಿಂದ ಸಾಕಷ್ಟು ಅರ್ಜಿಗಳನ್ನು ಪದೇ ಪದೇ ಸಲ್ಲಿಸುತ್ತಿದ್ದರೆ ಅದನ್ನು ನಿರ್ಬಂಧಿಸಲು ಮಾಹಿತಿ ಹಕ್ಕಿನಲ್ಲಿ ಅವಕಾಶವಿದೆ. ಅರ್ಜಿದಾರರು ಮಾಹಿತಿ ಕೋರುವ ಸಂದಭರ್ದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿದರೆ ಇದರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದು.

ಡಾ.ಸುಚೇತನ ಸ್ವರೂಪ್, ರಾಜ್ಯ ಮುಖ್ಯ ಮಾಹಿತಿ ಆಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X