ಕಡೂರು: ತಾಲೂಕು ನೌಕರರ ಕ್ರೀಡಾಕೂಟ ಜನವರಿ-2ಕ್ಕೆ- ವೈ.ಎಂ. ತಿಪ್ಪೇಶ್
ಕಡೂರು, ಡಿ.28: ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವು ಬರುವ ಜನವರಿ 2 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜರುಗಲಿದೆ ಎಂದು ಕಡೂರು ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ. ತಿಪ್ಪೇಶ್ ತಿಳಿಸಿದರು.
ಅವರು ಸರ್ಕಾರಿ ನೌಕರರ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಈ ಕ್ರೀಡಾಕೂಟದಲ್ಲಿ ಎಲ್ಲಾ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ನೌಕರರುಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಹಾಜರಾತಿ ಪತ್ರ ಮತ್ತು ಗೆದ್ದವರಿಗೆ ಬಹುಮಾನ ನೀಡಲಾಗುವುದು. ಹಾಗೂ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.
ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಗುಂಪು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಯೋಮಿತಿಯ ಆಧಾರದ ಮೇಲೆ ಕ್ರೀಡೆಗಳು ನಡೆಯಲಿದೆ. ಸರ್ಕಾರಿ ನೌಕರರು ಪ್ರತಿದಿನ ತಮ್ಮ ಕೆಲಸದ ಒತ್ತಡದಲ್ಲಿ ಸಿಲುಕಿರುತ್ತಾರೆ. ಈ ಕ್ರೀಡೆಯಿಂದ ಅವರು ಮಾನಸಿಕವಾಗಿ ಸಿದ್ಧರಾಗಬೇಕಿದೆ ಹಾಗೂ ತಮ್ಮ ಆರೋಗ್ಯಕ್ಕೆ ಕ್ರೀಡೆ ಮುಖ್ಯವಾಗಲಿದೆ. ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ನಾಟಕ, ಜಾನಪದ ಗೀತೆಗಳು ಇರಲಿದೆ ಎಂದರು.
ತಾಲೂಕಿನಲ್ಲಿ ಸುಮಾರು ಮೂರು ಸಾವಿರ ನೌಕರರಿದ್ದು, ಇದರಲ್ಲಿ ಪೊಲೀಸ್ ರಾಜ್ಯ ಸಾರಿಗೆ ಹಾಗೂ ಮೆಸ್ಕಾಂ ಹೊರತುಪಡಿಸಿ ಉಳಿದ ಎಲ್ಲಾ ಇಲಾಖೆಗಳಿಂದ ಸುಮಾರು 1000 ನೌಕರರು ಭಾಗವಹಿಸುವ ನಿರೀಕ್ಷೆಯಿದೆ. ಮಹಿಳೆಯರಿಗೆ ಪ್ರತ್ಯೇಕವಾದ ಕ್ರೀಡೆಗಳು ಇರಲಿವೆ. ಕ್ರೀಡಾಕೂಟವನ್ನು ಶಾಸಕ ವೈ.ಎಸ್.ವಿ. ದತ್ತ ಉದ್ಘಾಟಿಸಲಿದ್ದು, ತಹಸೀಲ್ದಾರ್ ಶ್ರೀಮತಿ ಭಾಗ್ಯ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಹಾಗೂ ಎಲ್ಲಾ ವೃಂದದ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಂಘದ ಕಾರ್ಯದರ್ಶಿ ಎ. ಲಕ್ಷ್ಮಣ್, ತಾಲ್ಲೂಕು ಗೌರವಾಧ್ಯಕ್ಷ ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್. ಹಾಲಪ್ಪ, ಸಾಂಸ್ಕøತಿಕ ಕಾರ್ಯದರ್ಶಿ ಲಿಂಗರಾಜು, ಕ್ರೀಡಾ ಕಾರ್ಯದರ್ಶಿ ಟಿ.ಜಿ. ಮಂಜಪ್ಪ, ಮಾಜಿ ಅಧ್ಯಕ್ಷ ಎಂ.ಬಿ. ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.







