ಗಾಂಜಾ ಮಾರಾಟ: ಆರೋಪಿಯ ಬಂಧನ
ಕೊಣಾಜೆ, ಡಿ. 28: ಕೊಣಾಜೆ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನಾರ್ಯ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವರ್ಕಾಡಿ ಗ್ರಾಮದ ತಲೆಕ್ಕಿ ಗ್ರಾಮದ ಮಹಮ್ಮದ್ ಬಶೀರ್(21) ಎಂದು ಗುರುತಿಸಲಾಗಿದೆ. ಈತನಿಂದ ಪೊಲೀಸರು 1 ಕೆ.ಜಿ 300 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





