Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುದ್ಧ ಸಮಯದ ಲೈಂಗಿಕ ಗುಲಾಮಗಿರಿ: ಜಪಾನ್...

ಯುದ್ಧ ಸಮಯದ ಲೈಂಗಿಕ ಗುಲಾಮಗಿರಿ: ಜಪಾನ್ ಜೊತೆ ಒಪ್ಪಂದ ನವೀಕರಿಸಲು ದ.ಕೊರಿಯಾ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ28 Dec 2017 11:03 PM IST
share
ಯುದ್ಧ ಸಮಯದ ಲೈಂಗಿಕ ಗುಲಾಮಗಿರಿ: ಜಪಾನ್ ಜೊತೆ ಒಪ್ಪಂದ ನವೀಕರಿಸಲು ದ.ಕೊರಿಯಾ ನಿರ್ಧಾರ

ಸಿಯೋಲ್, ಡಿ.28: ಕೊರಿಯನ್ ಮಹಿಳೆಯರನ್ನು ಯುದ್ಧಸಮಯದ ಲೈಂಗಿಕ ಗುಲಾಮಗಿರಿಗೆ ತಳ್ಳಿದ ದಶಕಗಳಷ್ಟು ಹಳೆಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ 2015ರಲ್ಲಿ ಜಪಾನ್ ಜೊತೆ ಮಾಡಿಕೊಂಡಿರುವ ಒಪ್ಪಂದದಲ್ಲಿ ಗಂಭೀರ ಸ್ವರೂಪದ ತಪ್ಪುಗಳಿರುವುದಾಗಿ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ ಜೇ-ಇನ್ ಗುರುವಾರ ತಿಳಿಸಿದ್ದಾರೆ.

ಎರಡೂ ದೇಶಗಳು ಈ ಒಪ್ಪಂದವನ್ನು ಅಂತಿಮ ಮತ್ತು ಬದಲಾಯಿಸಲಾಗದ್ದು ಎಂದು ಘೋಷಿಸಿದ ಎರಡು ವರ್ಷಗಳ ನಂತರ ಮೂನ್ ಜೇ-ಇನ್ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿಕೆ ನೀಡಿರುವುದು ಮತ್ತು ಆ ಕ್ರಮಗಳು ಯಾವುದು ಎಂದು ಸ್ಪಷ್ಟಪಡಿಸದೆ ಇರುವುದು ಈ ಒಪ್ಪಂದದ ಮುಂದುವರಿಕೆ ಬಗ್ಗೆಯೇ ಸಂಶಯ ಹುಟ್ಟುಹಾಕಿದೆ. ದ.ಕೊರಿಯಾದ ಈ ಹಿಂದಿನ ಸಂಪ್ರದಾಯವಾದಿ ಸರಕಾರ ಈ ಒಪ್ಪಂದವನ್ನು ಮಾಡುವ ವೇಳೆ ಸಂತ್ರಸ್ತರ ಜೊತೆ ಸರಿಯಾಗಿ ಚರ್ಚಿಸುವಲ್ಲಿ ವಿಫಲವಾಗಿದೆ ಎಂದು ಸರಕಾರ ನಿಯೋಜಿತ ಸಮಿತಿಯು ನೀಡಿರುವ ವರದಿಯ ಆಧಾರದಲ್ಲಿ ಮೂನ್ ಈ ಹೇಳಿಕೆಯನ್ನು ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕೊರಿಯಾ ಸರಕಾರ ಲೈಂಗಿಕ ಗುಲಾಮಗಿರಿ ಎಂಬ ಶಬ್ದವನ್ನು ಬಳಸುವುದನ್ನು ನಿಲ್ಲಿಸಬೇಕು ಮತ್ತು ಸಿಯೋಲ್‌ನಲ್ಲಿರುವ ರಾಯಭಾರ ಕಚೇರಿಯ ಮುಂದೆ ಸ್ಥಾಪಿಸಲಾಗಿರುವ ಲೈಂಗಿಕ ಗುಲಾಮರನ್ನು ಪ್ರತಿನಿಧಿಸುವ ಕಂಚಿನ ಪ್ರತಿಮೆಯನ್ನು ತೆಗೆಯಲು ನಿರ್ದಿಷ್ಟ ಯೋಜನೆಯನ್ನು ರೂಪಿಸಬೇಕು ಎಂಬ ಜಪಾನ್‌ನ ಬೇಡಿಕೆಗಳು ಸೇರಿದಂತೆ ಒಪ್ಪಂದದಲ್ಲಿ ತಿಳಿಸಲಾಗಿರುವ ಹಲವು ವಿಷಯಗಳನ್ನು ಸಾರ್ವಜನಿಕಗೊಳಿಸಲಾಗಿಲ್ಲ ಎಂದು ಸಮಿತಿ ತಿಳಿಸಿದೆ.

ಈ ಒಪ್ಪಂದವು ಎರಡು ದೇಶಗಳು ಪರಸ್ಪರ ನೀಡಿರುವ ಅಧಿಕೃತ ಭರವಸೆ ಮತ್ತು ಅದನ್ನು ಎರಡೂ ದೇಶಗಳ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ತಿಳಿದಿದ್ದರೂ ನಾನು ಈ ದೇಶದ ಅಧ್ಯಕ್ಷನಾಗಿ ಮತ್ತು ಕೊರಿಯನ್ ಜನರ ಪರವಾಗಿ ಮತ್ತೊಮ್ಮೆ ದೃಡವಾಗಿ ಹೇಳುವುದೇನೆಂದರೆ ಈ ಒಪ್ಪಂದವು ಲೈಂಗಿಕ ಗುಲಾಮಗಿರಿಗೆ ತಳ್ಳಲ್ಪಟ್ಟ ಮಹಿಳೆಯರ ಸಮಸ್ಯೆಯನ್ನು ಪರಿಹರಿಸುವುದಿಲ್ಲ, ಎಂದು ಮೂನ್ ತಿಳಿಸಿದ್ದಾರೆ.

ಒಪ್ಪಂದದ ಪ್ರಕಾರ ಜಪಾನ್ ಬದುಕಿರುವ ಲೈಂಗಿಕ ಗುಲಾಮಗಿರಿ ಸಂತ್ರಸ್ತರಿಗೆ ನಗದು ಪರಿಹಾರ ನೀಡುವುದಾಗಿ ಒಪ್ಪಿಕೊಂಡಿದ್ದರೆ ದಕ್ಷಿಣ ಕೊರಿಯಾ ರಾಯಭಾರ ಕಚೇರಿಯ ಮುಂದೆ ಇರುವ ಪ್ರತಿಮೆಯನ್ನು ತೆಗೆಯುವ ಮೂಲಕ ಜಪಾನ್ ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X