ಉಡುಪಿ ಪೊಲೀಸ್ ಕ್ರೀಡಾಕೂಟ: ಡಿಎಆರ್‌ಗೆ ಸಮಗ್ರ ಪ್ರಶಸ್ತಿ

ಉಡುಪಿ, ಡಿ.29: ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ತಂಡ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.
ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪುರುಷರ ವಿಭಾಗದಲ್ಲಿ ಕುಂದಾಪುರ ಉಪವಿಭಾಗ ತಂಡದ ನಾಗೇಶ್ ಗೌಡ ಬೈಂದೂರು, ಮಹಿಳೆಯರ ವಿಭಾಗ ದಲ್ಲಿ ಚೈತ್ರಾ ಉಡುಪಿ ಪಡೆದುಕೊಂಡಿದ್ದಾರೆ. ಶುಕ್ರವಾರ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ಉಡುಪಿ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಂಜೀವ ಎಂ.ಪಾಟೀಲ್ ಸ್ವಾಗತಿಸಿದರು. ಡಾ.ಮಂಜುಳಾ ಪಾಟೀಲ್ ಉಪಸ್ಥಿತರಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ವಂದಿಸಿದರು. ಜಿಲ್ಲಾ ಕಂಟ್ರೋಲ್ ರೂಂನ ಪ್ರಭಾರ ಪಿಎಸ್ಸೈ ಬಿ.ಮನಮೋಹನ್ ರಾವ್ ಕಾರ್ಯಕ್ರಮ ನಿರೂಪಿಸಿದರು.
Next Story





