ಹರಿಹರ:ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು
ಹರಿಹರ,ಡಿ.29: ನಗರದ ತುಂಗಾಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆ ತಾಲೂಕಿನ ಮಾಗಾನಹಳ್ಳಿಯ ಕಿರಣ್ (11) ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕ. ಕಿರಣ್ ತನ್ನ ಮೂವರು ಸ್ನೇಹಿತರೊಂದಿಗೆ ಈಜಲು ತೆರಳಿದ್ದಾನೆ. ನೀರಿನಲ್ಲಿ ಆಟವಾಡುತ್ತಿದ್ದಾಗ ಗುಂಡಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದು, ತಡರಾತ್ರಿವರೆಗೂ ಹುಡುಕಾಟ ನಡೆಸಿದರೂ ಬಾಲಕನ ಶವ ಪತ್ತೆಯಾಗಿರಲಿಲ್ಲ. ಶುಕ್ರವಾರ ಬೆಳಗ್ಗೆ ಮುಳುಗು ತಜ್ಞರು ಶೋಧ ನಡೆಸಿ ಶವವನ್ನು ಹೊರ ತೆಗೆದಿದ್ದಾರೆ. ಈ ಕುರಿತು ಹರಿಹರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





