Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಲಾರ :ಮೂಲಭೂತ ಸೌಕರ್ಯಗಳಿಗೆ ಒತ್ತಾಯಿಸಿ...

ಕೋಲಾರ :ಮೂಲಭೂತ ಸೌಕರ್ಯಗಳಿಗೆ ಒತ್ತಾಯಿಸಿ ಶಿಲ್ಲಂಗೆರೆ ಯುವಕರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 Dec 2017 8:46 PM IST
share

ಕೋಲಾರ,ಡಿ.29: ಕೋಲಾರ ತಾಲ್ಲೂಕು ಶಿಳ್ಳಂಗೆರೆ ಗ್ರಾಮದಲ್ಲಿ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿಕೊಡುವಂತೆ ಒತ್ತಾಯಿಸಿ ಕೋಲಾರ ಜಿಲ್ಲಾ ಪಂಚಾಯತ್ ಮುಂದೆ ಶಿಳ್ಳಂಗೆರೆ ಗ್ರಾಮಸ್ಥರು ಮತ್ತು ಕುವೆಂಪು ಕನ್ನಡ ಯುವಕರ ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು..

ಕೋಲಾರ ತಾಲ್ಲೂಕು ಹರಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಶಿಳ್ಳಂಗೆರೆ ಗ್ರಾಮದಲ್ಲಿ ಸುಮಾರು 4000 ಜನಸಂಖ್ಯೆ ವಾಸವಾಗಿದ್ದು, ಮೂಲಭೂತ ಸೌಕರ್ಯಗಳ ಸಮಸ್ಯೆಗಳು ಇದ್ದು, ಗ್ರಾಮ ಪಂಚಾಯಿತಿಯಗೆ ಸಮಸ್ಯೆಗಳನ್ನು ಬಗೆಹರಿಸಲು ಮನವಿಗಳನ್ನು ನೀಡಿದ್ದರೂ ಯಾವುದೇ ಪ್ರಗತಿ ಕಾಣದಾಗಿದೆ. ಹರಟಿ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕುವೆಂಪು ಯುವಕರ ಸೇನೆಯಿಂದ  ಮನವಿ ನೀಡಲಾಗಿತ್ತು. ಮನವಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಿಕೊಡುವಂತೆ ಕೋರಲಾಗಿತ್ತು. ಆದರೂ ಪಂಚಾಯಿತಿಯ ಯಾರೋಬ್ಬರೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ  ಎಂದು ಸಂಘದ ಅಧ್ಯಕ್ಷ ಹರೀಶ್ ಆರೋಪಿಸಿದ್ದಾರೆ.

ಶಿಳ್ಳಂಗೆರೆ ಗ್ರಾಮದಲ್ಲಿ ಮುಖ್ಯ ರಸ್ತೆಯು ತುಂಬಾ ಹದಗೆಟ್ಟಿದ್ದು, ಶಾಲಾಮಕ್ಕಳು, ವೃದ್ಧರು ರಸ್ತೆಯಲ್ಲಿ ಸಂಚರಿಸಲು ಕಷ್ಠಕರವಾಗಿರುತ್ತದೆ. ಇನ್ನು ಮಳೆಗಾಲದಲ್ಲಿ ಅಳಕೊಳ್ಳಗಳಿಂದ ರಸ್ತೆಯೂ ಪೂರ್ತಿ ಕೆಸರು ಗದ್ದೆಯಂತೆ ಕಾಣುತ್ತದೆ. ಉಪ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು 24 ಗಂಟೆಗಳೂ ವೈದ್ಯಕೀಯ ಸೌಲಭ್ಯಗಳು ದೊರೆಕಿಸಿಕೊಡಬೇಕೆಂದು ಒತ್ತಾಯಿಸಲಾಯಿತು.

ಗ್ರಾಮದ ವೆಂಕಟಪ್ಪನ ಮನೆಯವರೆಗೂ ರಾಜಬೀದಿ ಇದ್ದು, ಈ ರಸ್ತೆಯನ್ನು ಸಿ.ಸಿ. ರಸ್ತೆಯನ್ನಾಗಿ, ಎರಡೂ ಬದಿಯಲ್ಲೂ ನೀರು ಹೋಗಲು ಒಳಚರಂಡಿ ನಿರ್ಮಿಸಿ ವೃದ್ದರು ಶಾಲಾಮಕ್ಕಳು ವಾಹನಗಳು ಸರಾಗವಾಗಿ ಚಲಿಸಲು  ಅನುಕೂಲವಾಗಿದೆ, ಶಾಸಕರ ನಿಧಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಸರಿಯಾದ ನಿರ್ವಹಣೆಯಿಲ್ಲದೆ ಚಿಲ್ಲರೆ ಅಂಗಡಿಯಂತೆ ಮುಚ್ಚಿಹಾಕುತ್ತಾರೆ. ಅದನ್ನು ಪುನರಾರಂಭಿಸಬೇಕೆಂದು ಹಾಗೂ ಗ್ರಾಮದ ಊರುಬಾಗಿಲು ಕಲ್ಲುಗಳು ಬಿದ್ದುಹೋಗಿದ್ದು, ಅದನ್ನು ಕೆಡವಿ ಸಿಮೆಂಟ್‍ನಿಂದ ಕಮಾನು ನಿರ್ಮಿಸಿಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯ ನಂತರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮಿ ನಾರಾಯಣ್‍ರವರಿಗೆ ಮನವಿ ಸಲ್ಲಿಸಿದರು.

ಈ ಪ್ರತಿಭಟನೆಯಲ್ಲ್ಲಿ ಸಂಘದ ಉಪಾಧ್ಯಕ್ಷ ಪದ್ಮನಾಭ್, ಪವನ್, ಅನಿಲ್, ಚೌಡೇಶ್, ನಾರಾಯಣಸ್ವಾಮಿ, ರವಿ, ಪ್ರವೀಣ್, ಶ್ರೀನಿವಾಸ್, ಅರುಣ್, ಹೂಹಳ್ಳಿ ನಾಗರಾಜ್, ಪ್ರೇಮ್, ಮಧು, ನಾರಾಯಣಸ್ವಾಮಿ, ಸುರೇಶ್, ಸುಮನ್, ಮಣಿ, ನಾಗರಾಜ್ ಮಾರುತಿ,  ಮಹೇಶ್‍ಬಾಬು, ಅಪ್ಪು ಭಾಗವಹಿಸಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X