ಕಲೆ ಸಂಸ್ಕೃತಿಯನ್ನು ಬೆಳೆಸುವ ಕಾರ್ಯ ನಡೆಯಬೇಕಿದೆ: ಎ.ಸಿ.ಭಂಡಾರಿ
ದೇರಳಕಟ್ಟೆಯಲ್ಲಿ ರತ್ನೋತ್ಸವ-2017

ಕೊಣಾಜೆ, ಡಿ. 29: ಮೌಲ್ಯಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡುವುದರಿಂದ ನಮ್ಮ ಸಂಸ್ಕಾರ ಸಂಸ್ಕೃತಿ ಉಳಿಯಲು ಸಾಧ್ಯ. ಕಲೆ ಸಂಸ್ಕೃತಿಯನ್ನು ಬೆಳೆಸುವ ಕಾರ್ಯಕ್ಕೆ ನಾವೆಲ್ಲರೂ ಕೈ ಜೋಡಿಸಬೇಕಿದ್ದು ಮುಖ್ಯವಾಗಿ ಎಳವೆ ಮಕ್ಕಳಲ್ಲಿ ಇಂತಹ ಸಂಸ್ಕಾರವನ್ನು ಬೆಳೆಸಬೇಕಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ಎ. ಸಿ. ಭಂಡಾರಿ ಹೇಳಿದರು
ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ನಡೆಯುತ್ತಿರುವ 6ನೇ ವರ್ಷದ ನಾಡುನುಡಿ ವೈಭವದ ರತ್ನೋತ್ಸವ-2017 ಕರಾವಳಿ ಕರ್ನಾಟಕದ ಸಾಹಿತ್ಯ ಸಾಂಸ್ಕ್ರತಿಕ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು
ವಿದ್ಯಾರತ್ನ ಶಾಲೆ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಾದರೂ ಕನ್ನಡ ಭಾಷೆಗೆ ತಮ್ಮದೇ ರೀತಿಯಲ್ಲಿ ದೊಡ್ಡ ಕೊಡುಗೆ ನೀಡುತ್ತಿರುವುರೊಂದಿಗೆ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡುತ್ತಿದೆ ಎಂದು ಹೇಳಿದರು. ಸಮ್ಮೇಳನದ ಅಧ್ಯಕ್ಷ ಪ್ರಕರ್ತ ಮಲಾರ್ ಜಯರಾಮ್ ರೈ ಮಾತನಾಡಿದರು.
ಕಾರ್ಯಕ್ರಮಲದಲ್ಲಿ ಕೋಟೆಕಾರು ಶ್ರೀ ಶಂಕರ ಮಠದ ಧರ್ಮಾಧಿಕಾರಿ ಸತ್ಯಶಂಕರ ಬೊಳ್ಳಾವ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಕೆ.ಟಿ. ಸುವರ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮಿ ಗಟ್ಟಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮುಸ್ತಫಾ ಮಲಾರ್, ಸುರತ್ಕಲ್ ನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲ್ಬಾವಿ, ಕೊರಗಪ್ಪ ಶೆಟ್ಟಿ ಹರೇಕಳ, ರತ್ನಾವತಿ ಕೊರಗಪ್ಪ ಶೆಟ್ಟಿ, ಟ್ರಸ್ಟ್ ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಹರೇಕಳ, ಬೆಳ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಾ ಕೃಷ್ಣಪ್ಪ, ವಿದ್ಯಾರತ್ನ ಸಂಸ್ಥೆಯ ಕಾರ್ಯದರ್ಶಿ ಸೌಮ್ಯಾ ಆರ್. ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ನಯೀಮ್ ಹಮೀದ್ ಹಾಗೂ ವಿದ್ಯಾರ್ಥಿ ನಾಯಕ ಶ್ರೇಯಸ್ ಉಪಸ್ಥಿತರಿದ್ದರು.
ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು.ಉಪಾಧ್ಯಕ್ಷರಾದ ಸೌಮ್ಯ ಆರ್ ಶೆಟ್ಟಿ ಅವರು ವಂದಿಸಿದರು.
ಸಭಾ ಕಾರ್ಯಕ್ರಮದ ಆರಂಭದ ಮುನ್ನ ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಕಾರ್ಯಕ್ರಮದ ಸ್ಥಳದ ವರೆಗೆ ಭವ್ಯ ಮೆರವಣಿಗೆ ನಡಯಿತು.







