ಅಸೈಗೋಳಿ ಅಭಯಾಶ್ರಯ ಸಂಸ್ಥಾಪನಾ ದಿನ

ಮಂಗಳೂರು, ಡಿ. 29: ಅಸೈಗೋಳಿಯಲ್ಲಿರುವ ಅಭಯಾಶ್ರಯದಲ್ಲಿ ಸಂಸ್ಥಾಪನಾ ದಿನಾಚರಣೆ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಾರತೀಯ ಸೇನೆಯ ನಿವೃತ್ತ ಬ್ರಿಗೇಡಿಯರ್ ಐ.ಎನ್.ರೈ, ಪ್ರತಿದಿನ ದೇವರಲ್ಲಿ ಪ್ರಾರ್ಥಿಸುವವರು ದೇಶದ ಗಡಿ ಕಾಯುವ ಸೈನಿಕರಿಗೂ ಪ್ರಾರ್ಥಿಸಿ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಯೆನೆಪೊಯ ವಿಶ್ವವಿದ್ಯಾಲಯದ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ ಅವರು, ಅನಾಥರು, ನಿರ್ಗತಿಕರಿಗೆ ಆಶ್ರಯ ನೀಡಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಅಭಯಾಶ್ರಮದ ಕಾರ್ಯ ಶ್ಲಾಘನೀಯ ಎಂದರು.
ನಿವೃತ್ತ ಬ್ರಿಗೇಡಿಯರ್ ಐ.ಎನ್.ರೈ, ನಿಟ್ಟೆ ವಿವಿಯ ಎನ್.ವಿನಯ್ ಹೆಗ್ಡೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರಿಗೆ ಅಭಯಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.
ಅಭಯಾಶ್ರಯದ ಅಧ್ಯಕ್ಷ ಶ್ರೀನಾಥ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ರಾಮಶೇಷ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ಡಾ.ಲತಾ ಅಭಯಕುಮಾರ್ ಕಾರ್ಯಕ್ರಮ ನಿರೂಪಿಸಿದರು.
Next Story





