ಮಂಡ್ಯ: ಹೆಗಡೆಗೆ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

ಮಂಡ್ಯ, ಡಿ.29: ಜಿಲ್ಲಾ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಸರ್.ಎಂ.ವಿ. ಪ್ರತಿಮೆ ಎದುರು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ ಹಾಗೂ ರಾಜೀನಾಮೆಗೆ ಒತ್ತಾಯಿಸಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಆತ್ಮಾನಂದ ಮಾತನಾಡಿ, ಸಂವಿಧಾನಕ್ಕೆ ಬದಲಾಯಿಸುವುದಕ್ಕೆ ನಾವಿರುವುದು ಎನ್ನುವ ಮೂಲಕ ಸಂವಿಧಾನ ಮತ್ತು ಡಾ.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ವಜಾಮಾಡಬೇಕು ಎಂದು ಅವರು ಒತ್ತಾಯಿಸಿದರು.
ನಗರಸಭಾಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಮಾಜಿ ಅಧ್ಯಕ್ಷರಾದ ಹನ್ಸಿಯಾಭಾನು, ಸದಸ್ಯ ಟಿ.ಕೆ.ರಾಮಲಿಂಗಯ್ಯ, ನಗರ ಕಾಂಗ್ರೆಸ್ ಅಧ್ಯಕ್ಷ ಮುುಹಮದ್ ಜಬೀವುಲ್ಲಾ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಡಿ. ಜಯರಾಂ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಮಹಮದ್ ರಫೀವುಲ್ಲಾ, ಇಂಟೆಕ್ ಕಾಂಗ್ರೆಸ್ ಅಧ್ಯಕ್ಷ ಡಿ. ಸುದರ್ಶನ್, ಲೋಕೇಶ್, ಇತರರು ಪಾಲ್ಗೊಂಡಿದ್ದರು.





