ಕೋಟೇಶ್ವರ ಕಿನಾರ ಬೀಚ್‌ನಲ್ಲಿ ಊರ್‌ಮನಿ ಹಬ್ಬಕ್ಕೆ ಚಾಲನೆ

ಕುಂದಾಪುರ, ಡಿ.29: ಕೋಟೇಶ್ವರ ಕಿನಾರ ಬೀಚ್ ಉತ್ಸವ ಸಮಿತಿಯ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕುಂದಾಪುರ ಪುರಸಭೆ, ಬೀಜಾಡಿ ಹಾಗೂ ಕೋಟೇಶ್ವರ ಗ್ರಾಪಂ ಹಾಗೂ ಸ್ಥಳೀಯ ಯುವಕ ಮಂಡಲಗಳ ಸಹಯೋಗದೊಂದಿಗೆ ಉಡುಪಿ ಪರ್ಬದ ಪ್ರಯುಕ್ತ ಕೋಟೇಶ್ವರ ಬೀಜಾಡಿಯ ಕಿನಾರ ಬೀಚ್‌ನಲ್ಲಿ ಆಯೋಜಿಸಲಾದ ಊರ್‌ಮನಿ ಹಬ್ಬಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಚಾಲನೆ ನೀಡಿದರು.
ಉಡುಪಿ ಮತ್ತು ದ.ಕ. ಜಿಲ್ಲೆ ಮಾನವ ಸೂಚ್ಯಂಕದಲ್ಲಿ ಇಡೀ ದೇಶದಲ್ಲೇ ಮುಂಚೂಣಿಯಲ್ಲಿದೆ. ಈಗ ಸರಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತಿದೆ. ಆದುದರಿಂದ ಕರಾವಳಿ ಕರ್ನಾಟಕವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಅಭಿವೃದ್ಧಿ ಪಡಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅಧ್ಯಕ್ಷತೆಯನ್ನು ಕುಂದಾಪುರ ತಾಪಂ ಅಧ್ಯಕ್ಷೆ ಜಯಶ್ರೀ ಸುಧಾಕರ ಮೊಗ ವೀರ ವಹಿಸಿದ್ದರು. ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹೆರಿಯಣ್ಣ ಚಾತ್ರಬೆಟ್ಟು, ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ, ಜಿಪಂ ಸದಸ್ಯರಾದ ಶ್ರೀಲತಾ ಸುರೇಶ್ ಶೆಟ್ಟಿ, ಲಕ್ಷ್ಮೀ ಮಂಜು ಬಿಲ್ಲವ, ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ಜಾನಕಿ ಬಿಲ್ಲವ ಮಾತನಾಡಿದರು.
ಹಂಗಳೂರು ಚರ್ಚ್‌ನ ಧರ್ಮಗುರು ವಂ.ಜಾನ್ ಆಲ್ರೆಡ್ ಬರ್ಬೊಝ, ಕೋಟೇಶ್ವರ ಬೀಚ್ ಉತ್ಸವ ಸಮಿತಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ತಾಪಂ ಸದಸ್ಯೆ ವೈಲೇಟ್ ಬರೆಟ್ಟೋ, ಬೀಜಾಡಿ ಗ್ರಾಪಂ ಅಧ್ಯಕ್ಷೆ ಸಾಕು ಬೀಜಾಡಿ, ಉಪಾಧ್ಯಕ್ಷೆ ಜಯಂತಿ ಗಾಣಿಗ, ಸದಸ್ಯರಾದ ಪ್ರಕಾಶ್ ಜಿ.ಪೂಜಾರಿ, ಭಾಸ್ಕರ ಬಿಲ್ಲವ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ಶಿಲ್ಪಾನಾಗ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿದರು. ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.







