ಬೆಂಗಳೂರು: ಕೋ ಆಪರೇಟಿವ್ ಬ್ಯಾಂಕ್‌ಗಳು ಆಧುನಿಕತೆ ಅಳವಡಿಸಿಕೊಳ್ಳಲಿ: ಗಾಯಕ ವಿಜಯ ಪ್ರಕಾಶ್

ಬೆಂಗಳೂರು, ಡಿ.29: ಕೋ ಆಪರೇಟಿವ್ ಬ್ಯಾಂಕ್‌ಗಳು ಜನಸಾಮಾನ್ಯರ ಅಗತ್ಯತೆಗಳ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಖ್ಯಾತ ಗಾಯಕ ವಿಜಯ ಪ್ರಕಾಶ್ ಹೇಳಿದ್ದಾರೆ.
ನಗರದ ಖ್ಯಾತ ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ ಒಂದಾದ ಚರಣ್ ಕೋ ಆಪರೇಟಿವ್ ಬ್ಯಾಂಕ್‌ನಿಂದ ಗ್ರಾಹಕರಿಗೆ ರೂಪೇ ಕಾರ್ಡ್‌ಅನ್ನು ವಿತರಿಸಿ ಮಾತನಾಡಿದರು. ಕೋ ಆಪರೇಟಿವ್ ಬ್ಯಾಂಕ್‌ಗಳು ಜನ ಸಾಮಾನ್ಯರ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿವೆ. ದಿನ ನಿತ್ಯದ ಅಗತ್ಯತೆಗಳಿಗೆ ಅನುಗುಣವಾಗಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದರಿಂದ ಗ್ರಾಹಕರಿಗೆ ಇನ್ನೂ ಹೆಚ್ಚಿನ ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ಚರಣ್ ಬ್ಯಾಂಕ್ ಹೆಜ್ಜೆ ಇಟ್ಟಿರುವುದು ಬಹಳ ಸಂತಸದ ವಿಷಯ ಎಂದು ಗಾಯಕ ವಿಜಯ್ ಪ್ರಕಾಶ್ ಸಂತಸ ವ್ಯಕ್ತಪಡಿಸಿದರು.
ಚರಣ್ ಕೋ ಆಪರೇಟಿವ್ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಿ. ದ್ವಾರಕಾನಾಥ್ ಮಾತನಾಡಿ, ಚರಣ್ ಬ್ಯಾಂಕ್ ಸಹಕಾರಿ ಕ್ಷೇತ್ರದ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿರುವ ಬ್ಯಾಂಕ್ ಆಗಿದೆ. ಹಲವಾರು ಆಧುನಿಕ ಸೌಲಭ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಖಾಸಗಿ ಕ್ಷೇತ್ರದ ಬ್ಯಾಂಕ್‌ಗಳಗೆ ತೀವ್ರ ಸ್ಪರ್ಧೆಯನ್ನು ನೀಡುತ್ತಿದ್ದೇವೆ ಎಂದು ಹೇಳಿದರು.





