Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಪ್ಪಾದ ಸಿಯಾಂಗ್ ನದಿ: ಕಾರಣ ಇನ್ನೂ...

ಕಪ್ಪಾದ ಸಿಯಾಂಗ್ ನದಿ: ಕಾರಣ ಇನ್ನೂ ಅಸ್ಪಷ್ಟ

ವಾರ್ತಾಭಾರತಿವಾರ್ತಾಭಾರತಿ30 Dec 2017 6:57 PM IST
share
ಕಪ್ಪಾದ ಸಿಯಾಂಗ್ ನದಿ: ಕಾರಣ ಇನ್ನೂ ಅಸ್ಪಷ್ಟ

ಹೊಸದಿಲ್ಲಿ, ಡಿ.30: ಕೆಲವು ವಾರಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಹರಿಯುವ ಸಿಯಾಂಗ್ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ಇದಕ್ಕೆ ಕಾರಣ ಮಾತ್ರ ಇನ್ನು ಕೂಡಾ ಸ್ಪಷ್ಟವಾಗಿಲ್ಲ. ಕಳೆದ ನವೆಂಬರ್‌ನಲ್ಲಿ ಟಿಬೆಟ್‌ನಲ್ಲಿ ಸಂಭವಿಸಿದ ಸರಣಿ ಭೂಕಂಪದ ಪರಿಣಾಮವಾಗಿ ನದಿ ನೀರು ಕಪ್ಪಾಗಿರಬಹುದು ಎಂದು ಕೆಲದಿನಗಳ ಹಿಂದೆ ಚೀನಾ ತಿಳಿಸಿತ್ತು. ಚೀನಾದ ಭಾಗದಲ್ಲಿ ಬೃಹತ್ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು ಇದು ನದಿಗೆ ಬಿದ್ದರೆ ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ವ್ಯಾಪಕ ನೆರೆಹಾವಳಿ ಸಂಭವಿಸುವ ಸಾಧ್ಯತೆಯಿದೆ ಎಂದು ಚೀನಾ ಭಾರತವನ್ನು ಎಚ್ಚರಿಸಿದೆ.

ಈ ಬಗ್ಗೆ ಡಿಸೆಂಬರ್ 28ರಂದು ಸಂಸತ್‌ನಲ್ಲಿ ನೀಡಿದ ಉತ್ತರದಲ್ಲಿ ಕೇಂದ್ರ ಜಲಸಂಪನ್ಮೂಲ ರಾಜ್ಯ ಸಚಿವ ಅರ್ಜುನ್ ರಾಮ್ ಮೆಗ್ವಾಲ್, ಕೇಂದ್ರ ಸರಕಾರವು ತನ್ನ ಕಾಳಜಿ ಮತ್ತು ನಿಲುವಿನ ಬಗ್ಗೆ ಚೀನಾ ಸರಕಾರಕ್ಕೆ ಪತ್ರ ಮುಖೇನ ತಿಳಿಸಿರುವುದಾಗಿ ಹೇಳಿಕೆ ನೀಡಿದ್ದರು. ಸಿಯಾಂಗ್ ನದಿಯ ಬಣ್ಣ ಅದು ಭಾರತವನ್ನು ಪ್ರವೇಶಿಸುವ ಟುಟಿಂಗ್‌ನಲ್ಲಿ ಬದಲಾಗಿದ್ದು ಇದಕ್ಕೆ ನದಿಯಲ್ಲಿರುವ ಹೂಳು ಕೂಡಾ ಕಾರಣವಾಗಿರಬಹುದು ಎಂದು ಸಚಿವರು ತಿಳಿಸಿದ್ದರು. ಭಾರತಕ್ಕೆ ಪ್ರವೇಶಿಸುವ ಭಾಗದಲ್ಲಿ ನದಿಯ ನೀರಿನ ಮಟ್ಟ ಏಕಾಏಕಿ ಕಡಿಮೆಯಾಗಿದೆ ಎಂದು ಸಚಿವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿಯಾಂಗ್ ನದಿಯ ಬಣ್ಣ ಬದಲಾಗಲು ಟುಟಿಂಗ್‌ನಲ್ಲಿ ಸಂಭವಿಸಿರುವ ಭೂಕುಸಿತ, ಭೂಕಂಪ ಅಥವಾ ಇತರ ಯಾವುದೇ ಭೌಗೋಳಿಕ ಘಟನೆಗಳು ಕಾರಣವಾಗಿರಬಹುದು. ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ ನದಿಯ ಬಣ್ಣ ಬದಲಾಗಲು ಕಾರಣ ಕೂಡಾ ಸ್ಪಷ್ಟವಾಗಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಆದರೆ ಚೀನಾದ ಭಾಗದಲ್ಲಿ ಭೂಕುಸಿತ ಸಂಭವಿಸಿ ಮಣ್ಣು ಶೇಖರಣೆಯಾಗಿದ್ದು ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ನೆರೆಗೆ ತುತ್ತಾಗುವ ಸಾಧ್ಯತೆಯ ಬಗ್ಗೆ ಸಚಿವರು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X