ಮಾದಕ ವಸ್ತು ಕೊಕೇನ್ ಮಾರಾಟ: ವಿದೇಶಿ ಪ್ರಜೆ ಬಂಧನ
ಬೆಂಗಳೂರು, ಡಿ.30: ವೀಸಾ ನಿಯಮ ಉಲ್ಲಂಘಿಸಿ ನಗರದಲ್ಲಿ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನೈಜೀರಿಯಾ ದೇಶದ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾದ ಚುಕ್‌ಪುಡಿ ಕ್ರಿಶ್ಚಿಯನ್ ಬಂಧಿತ ಆರೋಪಿಯಾಗಿದ್ದು, ಈತನಿಂದ 5 ಗ್ರಾಂ ಕೊಕೇನ್, 3 ಮೊಬೈಲ್, 1 ಬೈಕ್, ಅಮೆರಿಕ ಡಾಲರ್ ನೋಟುಗಳು, 2 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಇಂದಿರಾನಗರ ವ್ಯಾಪ್ತಿಯ 6ನೆ ಕ್ರಾಸ್, 4ನೆ ಮುಖ್ಯರಸ್ತೆಯ ಬಿಬಿಎಂಪಿ ವಾರ್ಡ್ ನಂ.80ರ ಕಚೇರಿ ಎದುರಿನ ವಿಳಾಸದಲ್ಲಿ ವ್ಯಕ್ತಿಯೊಬ್ಬ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.
ಈ ಆಧಾರದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸ್ಥಳದ ಮೇಲೆ ದಾಳಿ ಮಾಡಿ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಈತ ವೀಸಾ ನಿಯಮ ಉಲ್ಲಂಘಿಸಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿರುವುದು ವಿಚಾರಣೆಯಿಂದ ತಿಳಿದುಬಂದಿದೆ. ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
Next Story





