ಬೆಂಗಳೂರು: ಮನೆಯ ಬೀಗ ಮುರಿದು ಕಳವು
ಬೆಂಗಳೂರು, ಡಿ.30: ಮನೆಯೊಂದರ ಬಾಗಿಲಿನ ಬೀಗ ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಬೀರುವನ್ನು ಮೀಟಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಯಲಹಂಕ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಗಲೂರಿನ ನಾಯಕ ನಗರದ 4ನೆ ಮುಖ್ಯರಸ್ತೆ ನಿವಾಸಿ ಕಿರಣ್‌ಕುಮಾರ್ ರೆಡ್ಡಿ ಎಂಬುವರು ಊರಿಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಇವರ ಮನೆಯ ಬೀಗ ಒಡೆದು ಒಳನುಗ್ಗಿ ಬೀರುವನ್ನು ಮೀಟಿ ಅದರಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ನೆರೆಮನೆಯವರು ಇವರ ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿ ಕಿರಣ್‌ಕುಮಾರ್ ರೆಡ್ಡಿ ಅವರಿಗೆ ದೂರವಾಣಿಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಯಲಹಂಕ ಉಪನಗರ ಪೊಲೀರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





