ಕುಕ್ಕೆಹಳ್ಳಿ ಫಿಶ್‌ಮಿಲ್ ಮುಚ್ಚಲು ಆಗ್ರಹಿಸಿ ಮನವಿ

ಉಡುಪಿ, ಡಿ.30: ಕುಕ್ಕೇಹಳ್ಳಿ- ಬೆಳ್ಳಂಪಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿರುವ ಮೀನು ಸಂಸ್ಕರಣಾ ಘಟಕ ಮುಚ್ಚುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ನೆಲ ಜಲ ಪರಿಸರ ಸಂರಕ್ಷಣಾ ವೇದಿಕೆಯು ಡಿ.29ರಂದು ಉಡುಪಿ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಿತು.
ಈ ಘಟಕದಿಂದ ಬರುವ ಕೆಟ್ಟ ತ್ಯಾಜ್ಯವನ್ನು ಸಂಸ್ಕರಿಸದೆ ನೇರವಾಗಿ ತೋಡಿಗೆ ಬಿಡಲಾಗುತ್ತಿದೆ. ಇದರಿಂದ ಆ ಪರಿಸರದ ಕುಡಿಯುವ ನೀರಿನ ಬಾವಿಗಳು ಕಲುಷಿತಗೊಂಡು ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಒಂದು ತಿಂಗಳೊಳಗೆ ಸಮಸ್ಯೆ ಪರಿಹರಿಸಿ ಗ್ರಾಮಸ್ಥರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾ ವಧಿ ಉಪವಾಸ ಧರಣಿ ನಡೆಸಲಾಗುವುದು. ಅಲ್ಲದೆ ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕಾರಿಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯಾಧ್ಯಕ್ಷೆ ಶ್ರೀಲತಾ ಶೆಟ್ಟಿ, ಉಪಾಧ್ಯಕ್ಷ ಅಂಬಲಪಾಡಿ ಉಮೇಶ್ ಕುಮಾರ್, ಕೋಶಾಧಿಕಾರಿ ಉದಯ ಕುಮಾರ್ ಶೆಟ್ಟಿ, ಯುವ ಘಟಕದ ರಾಜ್ಯಾಧ್ಯಕ್ಷ ಅರುಣ್ ಕುಮಾರ್, ಗ್ರಾಮಸ್ಥರಾದ ರಾಮಚಂದ್ರ ಭಟ್, ಜಗನ್ನಾಥ ನಾಯ್ಕ, ಜ್ಯೋತಿ ಶೆಟ್ಟಿ, ಅಮಿತಾ ಶೆಟ್ಟಿ, ಜಗದೀಶ್ ಭಟ್, ಪರಮೇಶ್ವರ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.





