ಬಸ್ ಢಿಕ್ಕಿ : ಬೈಕ್ ಸವಾರ ಮೃತ್ಯು
ಮೈಸೂರು,ಡಿ.30: ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿ ಬೈಕ್ ಸಾರಿಗೆ ಬಸ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಸವಾರ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರಿನ ನಂದಶರ್ಮಾ (45) ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಪ್ರಸನ್ನಕುಮಾರ್ ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶರ್ಮಾ ತಾಯಿಯನ್ನು ನೋಡಲು ಮೈಸೂರಿಗೆ ಬಂದಿದ್ದರು. ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದ ಬಸ್ ಢಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದು, ಶರ್ಮಾ ಅವರ ಮೇಲೆಯೇ ಬಸ್ಸಿನ ಹಿಂಬದಿಯ ಚಕ್ರ ಹರಿದಿತ್ತು. ಇದರಿಂದ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ದೇವರಾಜ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





