ಖಲೀಲ್ ಪಿಎಫ್‌ಐ ಸದಸ್ಯನಲ್ಲ : ನವಾಝ್ ಉಳ್ಳಾಲ
ಮಂಗಳೂರು, ಡಿ. 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಮತೀಯ ಗಲಭೆಗಳಿಗೆ ಕಾರಣವಾಗುತ್ತಿರುವ ಆರೋಪದ ಮೇಲೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಪಟ್ಟಣದ ನಿವಾಸಿಗಳಾದ ರತ್ನಾಕರ ಶೆಟ್ಟಿ ಮತ್ತು ಖಲೀಲ್ ಎಂಬವರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಆದರೆ ಕೆಲವೊಂದು ಮಾಧ್ಯಮಗಳಲ್ಲಿ ಖಲೀಲ್ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡ ಎಂದು ಬರುತ್ತಿದ್ದು, ಖಲೀಲ್ ಪಾಪ್ಯುಲರ್ ಫ್ರಂಟ್ ಸಾಮಾನ್ಯ ಕಾರ್ಯಕರ್ತನು ಕೂಡ ಅಲ್ಲ ಎಂದು ದ.ಕ. ಜಿಲ್ಲಾಧ್ಯಕ್ಷ ನವಾಝ್ ಉಳ್ಳಾಲ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





