ಮುಲ್ಕಿ: ಮನೆಗೆ ನುಗ್ಗಿ ಮಹಿಳೆಯ ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

ಮಂಗಳೂರು, ಡಿ. 30: ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣವನ್ನು ದೋಚಿರುವ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಕೊಲೆಯಾಗಿರುವ ಮಹಿಳೆಯನ್ನು ಸುಧಾಮ ಶೆಟ್ಟಿ ಅವರ ಪತ್ನಿ ವಸಂತಿ (59) ಎಂದು ಗುರುತಿಸಲಾಗಿದೆ.
ಕಿನ್ನಿಗೋಳಿ ಸಮೀಪದ ಐಕಳದಲ್ಲಿರುವ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮನೆಯೊಳಗೆ ಒಬ್ಬಂಟಿಯಾಗಿದ್ದ ವಸಂತಿ ಅವರನ್ನು ಕೊಲೆಗೈದು ಮನೆಯಲ್ಲಿದ್ದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.
ಕೃಷಿಕ ಹಾಗೂ ಎಲ್‌ಐಸಿಯಲ್ಲಿ ಕೆಲಸ ಮಾಡುತ್ತಿರುವ ಸುಧಾಮ ಶೆಟ್ಟಿ ಅವರು ಮನೆಯಿಂದ ಹೊರಗೆ ಇದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಸಂತಿ ಅವರು ಒಬ್ಬಂಟಿಯಾಗಿರುವುದನ್ನು ಅರಿತ ಪರಿಚಿತರಿಂದಲೇ ಈ ಕೃತ್ಯ ನಡೆದಿರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಮುಲ್ಕಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
Next Story





