ಕ್ರಿಸ್ಮಸ್ ಹಾಗೂ ಹೊಸ ವರ್ಷ: ಶಾಸಕ ಲೋಬೊರಿಂದ ಸೌಹಾರ್ದ ಸಂಭ್ರಮ

ಮಂಗಳೂರು, ಡಿ. 30: ಶಾಸಕ ಜೆ.ಆರ್.ಲೋಬೊ ಅವರು ಕ್ರಿಸ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಶನಿವಾರ ನಗರದ ಸೈಂಟ್ ಆಗ್ನೆಸ್ ವಿಶೇಷ ಮಕ್ಕಳ ಶಾಲಾ ಮೈದಾನದಲ್ಲಿ ಸೌಹಾರ್ದ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಮಂಗಳೂರು ಬಿಷಪ್ ಅಲೋಶಿಯಸ್ ಪೌಲ್ ಡಿಸೋಜ ಅವರು ಕೇಕ್‌ನ್ನು ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಾಮಕೃಷ್ಣ ಮಠದ ಜಿತಕಾಮಾನಂದ ಸ್ವಾಮೀಜಿ, ಬೆಂಗರೆ ಮೊಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಅಬ್ದುರ್ರಹ್ಮಾನ್, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್, ಸಚಿವ ರಮಾನಾಥ ರೈ, ಶಾಸಕ ಜೆ.ಆರ್.ಲೋಬೊ, ಮೇಯರ್ ಕವಿತಾ ಸನಿಲ್, ಮೂಡ ಅಧ್ಯಕ್ಷ ಸುರೇಶ್ ಬಳ್ಳಾಲ್, ವಿಶ್ರಾಂತ ಕುಲಪತಿ ವಿವೇಕ ರೈ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಶಾಸಕ, ಟಿ.ಕೆ.ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.
Next Story





