Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾವೇರಿ ನದಿ ಕಲುಷಿತ ತಡೆಯಲು ಅಗತ್ಯ...

ಕಾವೇರಿ ನದಿ ಕಲುಷಿತ ತಡೆಯಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಶ್ರೀವಿದ್ಯಾ ಭರವಸೆ

ವಾರ್ತಾಭಾರತಿವಾರ್ತಾಭಾರತಿ30 Dec 2017 11:42 PM IST
share
ಕಾವೇರಿ ನದಿ ಕಲುಷಿತ ತಡೆಯಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಶ್ರೀವಿದ್ಯಾ ಭರವಸೆ

ಮಡಿಕೇರಿ, ಡಿ.30: ಕಾವೇರಿ ನದಿ ಕಲುಷಿತಗೊಳ್ಳುವುದನ್ನು ತಡೆಯಲು ಮತ್ತು ನದಿಯ ಪಾವಿತ್ರ್ಯತೆಯನ್ನು ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಭರವಸೆ ನೀಡಿದ್ದಾರೆ. ಕಾವೇರಿ ನದಿ ಸ್ವಚ್ಚತಾ ಆಂದೋಲನದ ಪ್ರಮುಖರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಜೀವನದಿ ಕಲುಷಿತಗೊಳ್ಳುವುದನ್ನು ತಪ್ಪಿಸಲು ಶಾಶ್ವತ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಶ್ರೀವಿದ್ಯಾ ಕಾವೇರಿ ನದಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಸಮಗ್ರ ಅಧ್ಯಯನಕ್ಕಾಗಿ ಭಾರತೀಯ ವಿಜ್ಞಾನ ಸಂಸ್ಥೆಯೊಂದಿಗೆ ಸರಕಾರ ಒಪ್ಪಂದ ಮಾಡಿಕೊಂಡಿದ್ದು ಸೂಕ್ತ ಕ್ರಮಕ್ಕಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಮೂಲ ಕಾವೇರಿ ಸ್ಥಾನದಲ್ಲಿ ಪ್ರವಾಸಿಗರಿಂದ ಹಲವು ರೀತಿಯಲ್ಲಿ ನದಿ ತಟಗಳು ಸಂಪೂರ್ಣ ಕಲುಷಿತಗೊಳ್ಳುವುದರೊಂದಿಗೆ ನದಿಗೆ ನೇರವಾಗಿ ತ್ಯಾಜ್ಯಗಳು ಸೇರುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಸ್ಥಳೀಯ ಆಡಳಿತಗಳಿಗೆ ಕ್ರಮ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ. ಯಾವುದೇ ಸ್ಥಳಗಳಲ್ಲಿ ನದಿಗೆ ನೇರವಾಗಿ ಕಲುಷಿತ ತ್ಯಾಜ್ಯಗಳು ಸೇರದಂತೆ ಎಚ್ಚರವಹಿಸಲು ಸೂಚಿಸಲಾಗಿದೆ ಎಂದರು.

ಶಬರಿಮಲೆಯ ಪಂಪಾ ವ್ಯಾಪ್ತಿಯಲ್ಲಿ ಭಕ್ತಾದಿಗಳಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಬಹುತೇಕ ಯಶಸ್ಸು ಕಂಡಿದ್ದು ಇದೇ ರೀತಿ ತಲಕಾವೇರಿ, ಭಾಗಮಂಡಲ ಮುಂತಾದ ಕ್ಷೇತ್ರಗಳಲ್ಲಿ ಪ್ರವಾಸಿಗರಿಗೆ ಸ್ವಚ್ಛತೆ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ಸ್ಥಳೀಯ ಆಡಳಿತಗಳ ಮೂಲಕ ಸೂಚನಾ ಫಲಕಗಳನ್ನು ಅಳವಡಿಸಲು ಸಲಹೆ ನೀಡಲಾಗುವುದು. ಸ್ವಚ್ಛತೆ ನಿಟ್ಟಿನಲ್ಲಿ ಸ್ಥಳೀಯರು ಕೂಡ ಆಡಳಿತ ವ್ಯವಸ್ಥೆಯೊಂದಿಗೆ ಕೈ ಜೋಡಿಸಬೇಕಾಗಿದೆ ಎಂದು  ಜಿಲ್ಲಾಧಿಕಾರಿ ಭರವಸೆ ನೀಡಿದರು.

ಸಧ್ಯದಲ್ಲಿಯೇ ಸಿಎಸ್‍ಆರ್ ಸಭೆ ಕರೆಯಲಾಗುವುದು. ಕಾವೇರಿ ನದಿ ಬಗ್ಗೆ ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಲು ಸ್ಥಳೀಯರು ಮುಂದೆ ಬರಬೇಕು ಎಂದಿರುವ ಜಿಲ್ಲಾಧಿಕಾರಿಗಳು ಸ್ವಚ್ಛ ಕೊಡಗು ಹಾಗೂ ಸ್ವಚ್ಛ ಕಾವೇರಿ ನಿರ್ಮಾಣಕ್ಕಾಗಿ ಎಲ್ಲಾ ರೀತಿಯ ಕಾರ್ಯಯೋಜನೆಗಳನ್ನು ರೂಪಿಸಲಾಗುವುದು ಎಂದು ತಿ

ಇದೇ ಸಂದರ್ಭ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸತೀಶ್‍ಕುಮಾರ್, ಭಾಗಮಂಡಲದಲ್ಲಿ ಕಂಡು ಬಂದ ಅಶುಚಿತ್ವದ ಬಗ್ಗೆ ತಕ್ಷಣ ಕ್ರಮಕ್ಕೆ ಸೂಚಿಸಲಾಗಿದೆ. ಪ್ರವಾಸಿಗರಿಗೆ ಅಡುಗೆ ಮಾಡಲು ದಾಸೋಹ ಭವನ ನಿರ್ಮಿಸಲು ಚಿಂತನೆ ಹರಿಸಲಾಗಿದೆ. ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಭವನದಲ್ಲಿ ಪ್ರವಾಸಿಗರಿಗೆ ಅಡುಗೆ ಮಾಡಲು ಅವಕಾಶ ಕಲ್ಪಿಸಲಾಗುವುದು. ತ್ಯಾಜ್ಯಗಳ ವಿಲೇವಾರಿಗೆ ಕ್ರಮಕೈಗೊಳ್ಳಲಾಗುವುದು. ನಿರ್ದಿಷ್ಟ ಸ್ಥಳ ಹೊರತಾಗಿ ಬೇರೆಡೆ ರಸ್ತೆ ಬದಿ ಅಥವಾ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರವಾಸಿಗರು ಅಡುಗೆ ಮಾಡುವ ಚಟುವಟಿಕೆಗಳು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೇಡಿಕೆಗಳು: ಬೇಸಿಗೆಯ ಅವಧಿಯಲ್ಲಿ ಕಾವೇರಿ ನದಿಯಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸುವುದು, ನದಿಗೆ ತೆರಳಲು ಅಕ್ರಮವಾಗಿ ದಾರಿ ನಿರ್ಮಿಸುವ ಮೂಲಕ ಅಘೋಷಿತ ಪ್ರವಾಸಿ ಕೇಂದ್ರ ನಿರ್ಮಿಸಿರುವ ವ್ಯಕ್ತಿಗಳ ಮೇಲೆ ಕಾನೂನು ಕ್ರಮಕೈಗೊಳ್ಳುವುದು, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕಾವೇರಿ ನೀರಾವರಿ ನಿಗಮ, ಸ್ಥಳೀಯ ಗ್ರಾಮಪಂಚಾಯತ್ ಸೇರಿದಂತೆ ಪ್ರವಾಸೋದ್ಯಮ ಇಲಾಖೆ ಮೂಲಕ ಜಿಲ್ಲೆಯ ಪರಿಸರ ಹಾನಿ ಹಾಗೂ ಕಾವೇರಿ ನದಿ ಕಲುಷಿಕೆಯನ್ನು ಶಾಶ್ವತವಾಗಿ ತಪ್ಪಿಸಲು ಯೋಜನೆಗಳನ್ನು ರೂಪಿಸುವಂತೆ ಕಾವೇರಿ ನದಿ ಸ್ವಚ್ಚತಾ ಆಂದೋಲನದ ಸಂಚಾಲಕ ಎಂ.ಎನ್.ಚಂದ್ರಮೋಹನ್ ಕಾವೇರಿ ನದಿ ಜಾಗೃತಿ ಸಮಿತಿ ಸಂಚಾಲಕರಾದ ಡಿ.ಆರ್.ಸೋಮಶೇಖರ್ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X