Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕಾರಣಿಗಳು ತಾಯ್ನೆಲದಲ್ಲಿ ನಮ್ಮ...

ರಾಜಕಾರಣಿಗಳು ತಾಯ್ನೆಲದಲ್ಲಿ ನಮ್ಮ ಹಣವನ್ನೇ ದರೋಡೆ ಮಾಡುತ್ತಿದ್ದಾರೆ: ರಜಿನಿಕಾಂತ್

ವಾರ್ತಾಭಾರತಿವಾರ್ತಾಭಾರತಿ31 Dec 2017 9:04 PM IST
share
ರಾಜಕಾರಣಿಗಳು ತಾಯ್ನೆಲದಲ್ಲಿ ನಮ್ಮ ಹಣವನ್ನೇ ದರೋಡೆ ಮಾಡುತ್ತಿದ್ದಾರೆ: ರಜಿನಿಕಾಂತ್

ಚೆನ್ನೈ, ಡಿ. 31: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಿಸುವ ತನ್ನ ನಿರ್ಧಾರವನ್ನು ರವಿವಾರ ಘೋಷಿಸಿದ್ದಾರೆ ಹಾಗೂ ತಮಿಳುನಾಡಿನ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲ 234 ಸ್ಥಾಗಳಿಗೆ ಸ್ಪರ್ಧಿಸುವ ಭರವಸೆ ನೀಡಿದ್ದಾರೆ. ಇದರೊಂದಿಗೆ ರಜಿನಿಕಾಂತ್ ರಾಜಕೀಯ ಪ್ರವೇಶದ ಕುರಿತ ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ತುಂಬಿದ ಅಭಿಮಾನಿಗಳು ಕಿವಿಗಡಚಿಕ್ಕುವ ಚಪ್ಪಾಳೆ ನಡುವೆ 67 ವರ್ಷದ ರಜನಿಕಾಂತ್, ತಾನು ರಾಜಕೀಯ ಪ್ರವೇಶಿಸುವುದನ್ನು ಘೋಷಿಸಿದರು.

ಬಾಬಾ ಚಿತ್ರದ ಯೋಗದ ಹಸ್ತ ಚಿಹ್ನೆ ತೋರಿಸಿದ ರಜನಿಕಾಂತ್, ಪ್ರಾಮಾಣಿಕ ಹಾಗೂ ಜಾತಿ ರಾಜಕೀಯದಿಂದ ಮುಕ್ತ ಆಧ್ಯಾತ್ಮಿಕ ರಾಜಕೀಯದ ಸರಕಾರವನ್ನು ನಾವು ಅಸ್ತಿತ್ವಕ್ಕೆ ತರುತ್ತೇವೆ. ಇದು ನಮ್ಮ ಗುರಿ ಎಂದರು.

ಮುಖ್ಯಮಂತ್ರಿ ಹುದ್ದೆ ತುಂಬಾ ಹಿಂದೆಯೇ ನನಗೆ ಒಲಿದು ಬಂದಿತ್ತು. ನಾನೇ ತಿರಸ್ಕರಿಸಿದ್ದೆ. ಮುಖ್ಯಮಂತ್ರಿ ಹುದ್ದೆ ಹೊಂದುವುದು ನನ್ನ ಉದ್ದೇಶ ಅಲ್ಲ ಎಂದು ಅವರು ಹೇಳಿದ್ದಾರೆ.

‘‘ಕರ್ಮಣ್ಯೇ ವಾಧಿಕಾರಸ್ತೆ ಮಾಫಲೇಶು ಕದಾಚನ’’ (ನಿನ್ನ ಕೆಲಸವನ್ನು ನೀನು ಮಾಡು, ಫಲವನ್ನು ನಿರೀಕ್ಷಿಸಬೇಡ) ಎಂಬ ಭಗವದ್ಗೀತೆಯ ಶ್ಲೋಕವನ್ನು ಉಲ್ಲೇಖಿಸಿದ ಅವರು, ನಾನು ನನ್ನ ಕೆಲಸ ಮಾಡುತ್ತೇನೆ ಉಳಿದುದನ್ನು ದೇವರಿಗೆ ಬಿಡುತ್ತೇನೆ ಎಂದಿದ್ದಾರೆ.

ಪ್ರಜಾಪ್ರಭುತ್ವ ಕೆಟ್ಟ ಸ್ವರೂಪದಲ್ಲಿದೆ. ಪ್ರಜಾಪ್ರಭುತ್ವದ ಹೆಸರಿನಲ್ಲಿ ರಾಜಕಾರಣಿಗಳು ನಮ್ಮ ತಾಯ್ನೆಲೆದಲ್ಲಿ ನಮ್ಮ ಹಣವನ್ನೇ ದರೋಡೆ ಮಾಡುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡಲು ವ್ಯವಸ್ಥೆಯ ಅಡಿಪಾಯ ಬದಲಿಸುವ ಅಗತ್ಯತೆ ಇದೆ ಎಂದು ಅವರು ಹೇಳಿದರು.

ಈ ಹಂತದಲ್ಲಿ ನಾನು ರಾಜಕೀಯ ಪ್ರವೇಶಿಸದೇ ಇದ್ದರೆ, ನನ್ನ ಮೇಲೆ ಪ್ರೀತಿ, ವಿಶ್ವಾಸ ತೋರಿಸಿದ ಜನರಿಗೆ ಅವಮಾನ ಎಸಗಿದಂತೆ. ಇದು ಸಿನೆಮಾ ಅಲ್ಲ. ವಾಸ್ತವ ಎಂದು ರಜನಿಕಾಂತ್ ಹೇಳಿದರು.

ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಶುಭ ಹಾರೈಕೆ ಮುಂಬೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಹಾಗೂ ಕಮಲ್ ಹಾಸನ್ ಸೇರಿದಂತೆ ಹಲವು ನಟ-ನಟಿಯರು ಶುಭ ಹಾರೈಸಿದ್ದಾರೆ. ‘‘ಸಹೋದರ ರಜನಿಯ ಸಾಮಾಜಿಕ ಜವಾಬ್ದಾರಿ ಹಾಗೂ ರಾಜಕೀಯ ಪ್ರವೇಶವನ್ನು ನಾನು ಸ್ವಾಗತಿಸುತ್ತೇನೆ’’ ಎಂದು ಕಮಲ್ ಹಾಸ್ ಟ್ವೀಟ್ ಮಾಡಿದ್ದಾರೆ. ‘‘2017ರ ಕೊನೆ ದಿನವಾದ ರವಿವಾರ ಅವರು ವರ್ಷದ ಅತಿ ದೊಡ್ಡ ಸುದ್ದಿ ನೀಡಿದ್ದಾರೆ: ರಜನಿಕಾಂತ್ ರಾಜಕೀಯ ಸೇರುತ್ತಿದ್ದಾರೆ. ಜೈ ಹೋ’’ ಎಂದು ನಟ ಅನುಪಮ್ ಖೇರ್ ಬರೆದುಕೊಂಡಿದ್ದಾರೆ. ‘‘ಉದಾತ್ತ ಉದ್ದೇಶದಿಂದ ರಾಜಕೀಯ ಪ್ರವೇಶಿಸುತ್ತಿರುವುದರಿಂದ ಅವರು ಇನ್ನಷ್ಟು ಪ್ರೀತಿಗೆ ಪಾತ್ರರಾಗಲಿದ್ದಾರೆ’’ ಎಂದು ರಿತೇಶ್ ದೇಶ್‌ಮುಖ್ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ವಕ್ತಾರೆ, ನಟಿ ಖುಷ್ಪೂ ಕೂಡ ಟ್ವೀಟ್ ಮಾಡಿ ರಜಿನಿಕಾಂತ್‌ಗೆ ಶುಭ ಹಾರೈಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X