ಮಲ್ಪೆ ಬೀಚ್‌ನಲ್ಲಿ ‘ಉಡುಪಿ ಪರ್ಬ -ಅಡ್ವೆಂಚರ್ ಫೆಸ್ಟಿವಲ್’ಗೆ ತೆರೆ

ಮಲ್ಪೆ, ಡಿ.31: ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿರ್ಮಿತಿ ಕೇಂದ್ರ, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಮತ್ತು ಕರಾವಳಿ ಪ್ರವಾಸೋದ್ಯಮಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮಲ್ಪೆ ಬೀಚ್‌ನಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳ ಲಾದ ಉಡುಪಿ ಪರ್ಬ ಮತ್ತು ಅಡ್ವೆಂಚರ್ ಫೆಸ್ಟಿವಲ್ ರವಿವಾರ ತೆರೆ ಕಂಡಿತು.
ಸ್ಕೇಟ್ ಬೋರ್ಡಿಂಗ್‌ನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಇರುವ ವಿುಲ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳು ವಿಲರಾಗಿದ್ದಾರೆ. ಮಲ್ಪೆ ಹಾಗೂ ಪಡುಕೆರೆ ಬೀಚ್‌ನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರ ಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಜಿಲ್ಲಾಧಿ ಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಇಲಾಖೆಯ ಉಪನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಪೌರಾಯುಕ್ತ ಡಿ.ಮಂಜು ನಾಥಯ್ಯ ಉಪಸ್ಥಿತರಿದ್ದರು.
ಬಳಿಕ ಸರಿಗಮಪ ತಂಡದವರಿಂದ ಸಂಗೀತ ಸಂಜೆ ಜರಗಿತು. ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು, ಪ್ರೇಕ್ಷಕರು ಮಲ್ಪೆ ಬೀಚ್‌ನಲ್ಲಿ ನೆರೆದಿದ್ದು, ಡೈಯಲ್ ಮಂತ್ರದಿಂದ ಸುಡುಮದ್ದು ಸುಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲಾಯಿತು.







