ಕೆರಾಡಿ: ಕೋಡಿ ಬ್ಯಾರೀಸ್ ಪದವಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರ ಸಮಾರೋಪ

ಕುಂದಾಪುರ, ಜ.2: ಇಲ್ಲಿನ ಕೆರಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋಡಿ ಬ್ಯಾರೀಸ್ ಪದವಿ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ಶಿಬಿರ ಇತ್ತೀಚೆಗೆ ಸಮಾಪನಗೊಂಡಿತು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವರಸಿದ್ಧಿ ವಿನಾಯಕ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಕುಮಾರ್ ಮಾತನಾಡಿ, ರಾಷ್ಟ್ರದ ಒಳಿತಿಗಾಗಿರುವ ರಾಷ್ಟ್ರೀಯು ಸೇವಾ ಯೋಜನೆ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ವಿಕಸನಕ್ಕೆ ಉತ್ತಮ ವೇದಿಕೆ. ಇಂತಹ ಅವಕಾಶಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆರಾಡಿ ಗ್ರಾಪಂ ಅಧ್ಯಕ್ಷ ಸಂತೋಷ್‌ಕೊಠಾರಿ ಮಾತನಾಡಿ ಶುಭ ಹಾರೈಸಿದರು.
ಕೆರಾಡಿ ಗ್ರಾಪಂ ಸದಸ್ಯರಾದ ರಾಘವೇಂದ್ರ ಕೊಠಾರಿ ಯಶೋಧಾ ಬೋವಿ, ಯಶೋಧಾ ನಾಯಕ್, ಮಾರಣಕಟ್ಟೆ ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ, ತಾಪಂ ಮಾಜಿ ಸದಸ್ಯ ನಾಗಪ್ಪಕೊಠಾರಿ, ಕೆರಾಡಿ ಸ.ಹಿ.ಪ್ರಾ. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಂಜು ಕೊಠಾರಿ, ಕೋಡಿ ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್, ಕೆರಾಡಿ ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಜಯಂತ ಕೆ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಕೊಠಾರಿ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಶಂಕರ ಸ್ವಾಮಿಯಾಜಿ ಮುಂಡಕೋಡು ಉಪಸ್ಥಿತರಿದ್ದರು.
ಬ್ಯಾರೀಸ್ ಪದವಿ ಕಾಲೇಜಿನ ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಖಲಿಲ್ ಸ್ವಾಗತಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವಿದ್ಯಾಧರ್ ಪೂಜಾರಿ ವಂದಿಸಿದರು