ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ.ಡಿ.ಎಚ್.ವೇಲಾ ಆಯ್ಕೆ
ಬೆಂಗಳೂರು, ಜ.2: ಕಳೆದ ಐದು ವರ್ಷಗಳಿಂದ ಖಾಲಿಯಿದ್ದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವೇಲಾ ಅವಿರೋಧ ಆಯ್ಕೆಯಾಗಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನ್ಯಾ.ಡಿ.ಎಚ್.ವೇಲಾರನ್ನು ಆಯೋಗದ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು.
ಆಯ್ಕೆ ಸಮಿತಿ ಸಭೆಯಲ್ಲಿ ಸ್ಪೀಕರ್ ಕೆ.ಬಿ.ಕೋಳಿವಾಡ್, ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಗೃಹ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





