ಶಾದಿಮಹಲ್‌ನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು, ಜ.2: ಮಂಗಳೂರು ವೆಲ್‌ಫೇರ್ ಅಸೋಸಿಯೇಶನ್ ಬೋಳಾರ ಇದರ ವತಿಯಿಂದ ನೂತನ ಹವಾನಿಯಂತ್ರಿತ ಶಾದಿಮಹಲ್ ಕಟ್ಟಡಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಈ ಸಮಾಜ ಭವನಕ್ಕೆ ಸರಕಾರದ ಅನುದಾನ ದೊರಕಿಸಿಕೊಡುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಜೆ.ಆರ್.ಲೋಬೊ, ವಿಧಾನ ಪರಿಷತ್ ಮುಖ್ಯಸಚೇತಕ ಐವನ್ ಡಿಸೋಜ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮೇಯರ್ ಕವಿತಾ ಸನಿಲ್, ವಿಧಾನ ಪರಿಷತ್‌ನ ಮಾಜಿ ಮುಖ್ಯಸಚೇತಕ ಕೆ.ಎಸ್.ಮುಹಮ್ಮದ್ ಮಸೂದ್, ಕಾರ್ಪೊರೇಟರ್ ಕವಿತಾ ವಾಸು, ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ದ.ಕ.ಜಿಲ್ಲಾ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್, ಸಂಸ್ಥೆಯ ಮಾಜಿ ಅಧ್ಯಕ್ಷ ಝಮೀರ್ ಅಂಬರ್, ಅಬ್ದುಲ್ ರಶೀದ್ ಖಾನ್ ಉಪಸ್ಥಿತರಿದ್ದರು.
ಮಂಗಳೂರು ವೆಲ್‌ಫೇರ್ ಅಸೋಸಿಯೇಶನ್ ಅಧ್ಯಕ್ಷ ಯೂಸುಫ್ ಖಾರ್‌ದಾರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮೆಹ್‌ಫ್ಯೂಝ್ ಉರ್ ರೆಹಮಾನ್ ಪ್ರಾಸ್ತಾವಿಕ ಭಾಷಣ ಮಾಡಿದರು. ಜೊತೆ ಕಾರ್ಯದರ್ಶಿ ಮಕ್‌ಬೂಲ್ ಅಹ್ಮದ್ ವಂದಿಸಿದರು. ಮಾಜಿ ಕಾರ್ಪೊರೇಟರ್ ಮುಹಮ್ಮದ್ ನವಾಝ್ ಕಾರ್ಯಕ್ರಮ ನಿರೂಪಿಸಿದರು.





