ತುಮಕೂರು:ಕಾಂಗ್ರೆಸ್ ನಡಿಗೆ ವಿಜಯದ ಕಡೆಗೆ ಸಮಾವೇಶ
ತುಮಕೂರು,ಜ.02: ಮುಂದಿನ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಶಾಸಕರಿಲ್ಲದೆ ಕ್ಷೇತ್ರಗಳಲ್ಲಿ ಇದೇ ತಿಂಗಳ 4 ರಿಂದ 6 ರ ವರೆಗೆ ಕಾಂಗ್ರೆಸ್ ನಡಿಗೆ ವಿಜಯದ ಕಡೆ ಎಂಬ ಸಮಾವೇಶ ಆಯೋಜಿಸಿರುವುದಾಗಿ ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ರಾಧಾಕೃಷ್ಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಈ ಬೃಹತ್ ಕಾರ್ಯಕ್ರಮದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಲೋಕಸಭಾ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಎಂ.ವೀರಪ್ಪಮೊಯ್ಲಿ, ಸಚಿವರಾದ ಎಸ್.ಆರ್.ಪಾಟೀಲ್,ಟಿ.ಬಿ.ಜಯಚಂದ್ರ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫರ್ನಾಂಡೀಸ್, ಬಿ.ಕೆ.ಹರಿಪ್ರಸಾದ್, ರೇಹಮಾನ್ ಖಾನ್, ಸಿಡಬ್ಲ್ಯೂಸಿ ಸದಸ್ಯರಾದ ಮುನಿಯಪ್ಪ, ಲೋಕಸಭಾ ಸದಸ್ಯರಾದ ಎಸ್.ಪಿ.ಮುದ್ದಹನುಮೇಗೌಡ, ಸಚಿವರಾದ ಹೆಚ್.ಎಂ.ರೇವಣ್ಣ, ಕೆಪಿಸಿಸಿ ಉಪಾಧ್ಯಕ್ಷರಾದ ರಾಣಿ ಸತೀಶ್ ಸೇರಿದಂತೆ 16 ಜನರ ತಂಡ ಹಾಗೂ ಸಂಸದರು, ಶಾಸಕರು,ರಾಷ್ಟ್ರಮಟ್ಟದಿಂದ ವೀಕ್ಷಕರಾದ ವೇಣುಗೋಪಾಲ್, ಮಧುಯಾಸ್ಕಿ ಗೌಡ ಸೇರಿದಂತೆ ಅಯಾ ವಿಧಾನ ಸಭಾ ಕ್ಷೇತ್ರ ವಾಪ್ತಿಯ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಸದಸ್ಯರು ಹಾಗೂ ತಾಲೂಕಿನ ಮುಖಂಡರುಗಳು ಸಮಾವೇಶದಲ್ಲಿ ಭಾಗವಹಿಸುವರು.
ಇದೇ ತಿಂಗಳ 4 ರಂದು ಬೆಳಗ್ಗೆ 10 ಗಂಟೆಗೆ ತುರುವೇಕೆರೆ, ಮಧ್ಯಾಹ್ನ 1 ಗಂಟೆಗೆ ಗುಬ್ಬಿ, ಜ.5ರಂದು ಬೆಳಗ್ಗೆ 10 ಗಂಟೆಗೆ ಪಾವಗಡ, ಜ.6ರಂದು ಬೆಳಗ್ಗೆ 10 ಗಂಟೆಗೆ ತುಮಕೂರು ಗ್ರಾಮಾಂತರದ ಗುಳೂರು, ಮಧ್ಯಾಹ್ನ 1 ಗಂಟೆಗೆ ಚಿಕ್ಕನಾಯಕನಹಳ್ಳಿಯಲ್ಲಿ ಸಮಾವೇಶ ನಡೆಯಲಿವೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಉಪಾಧ್ಯಕ್ಷ ಅಲ್ತಾಫ್, ರಾಜೇಶ್ ದೊಡ್ಡಮನೆ ಇತರರು ಇದ್ದರು.





